Wildebeest analysis examples for:   kan-kan2017   Word’”    February 11, 2023 at 18:50    Script wb_pprint_html.py   by Ulf Hermjakob

631  GEN 24:39  ನಾನು ನನ್ನ ದಣಿಗೆ, ‘ಒಂದು ವೇಳೆ ನನ್ನ ಹಿಂದೆ ಬರುವುದಕ್ಕೆ ಆ ಕನ್ಯೆಗೆ ಮನಸ್ಸಿಲ್ಲದೆ ಹೋದರೆ’” ಎಂದು ಹೇಳಲು.
887  GEN 31:13  ನೀನು ಸ್ತಂಭವನ್ನು ಅಭಿಷೇಕಿಸಿ ನನಗೆ ಪ್ರಮಾಣ ಮಾಡಿದ ಬೇತೇಲಿನ ದೇವರು ನಾನೇ. ಈಗ ನೀನೆದ್ದು ಈ ದೇಶವನ್ನು ಬಿಟ್ಟು ನೀನು ಹುಟ್ಟಿದ ದೇಶಕ್ಕೂ ಬಂಧುಗಳ ಬಳಿಗೂ ಹಿಂತಿರುಗಿ ಹೋಗು’” ಎಂದು ಹೇಳಿದನು.
934  GEN 32:6  ಈಗ ಅವನಿಗೆ ಎತ್ತು, ಕತ್ತೆ ಮುಂತಾದ ಪಶುಗಳ ಹಿಂಡುಗಳೂ ದಾಸದಾಸಿಯರು ಇದ್ದಾರೆ. ಅವನು ತಮ್ಮ ದಯೆ ಆತನ ಮೇಲೆ ಇರಬೇಕೆಂದು ತಿಳಿಸುವುದಕ್ಕೆ ನಿಮ್ಮನ್ನು ಕಳುಹಿಸಿದ್ದಾನೆ’” ಎಂದು ಹೇಳಿರಿ ಅಂದನು.
1379  GEN 45:20  ನಿಮ್ಮ ಸಾಮಗ್ರಿಗಳಿಗಾಗಿ ಚಿಂತಿಸಬೇಡಿರಿ. ಐಗುಪ್ತ ದೇಶದಲ್ಲೆಲ್ಲಾ ಇರುವ ಉತ್ತಮ ವಸ್ತುಗಳು ನಿಮ್ಮದೇ’” ಎಂದು ಹೇಳಿದನು.
1456  GEN 48:4  ಆತನು ನನಗೆ, ‘ನಿನ್ನನ್ನು ಅಭಿವೃದ್ಧಿಪಡಿಸಿ ನಿನ್ನ ಸಂತತಿಯನ್ನು ಹೆಚ್ಚಿಸುವೆನು. ಅನೇಕ ಜನಾಂಗಗಳು ನಿನ್ನಿಂದುಟಾಗುವಂತೆ ಮಾಡುವೆನು. ನಿನ್ನ ತರುವಾಯ ನಿನ್ನ ಸಂತತಿಗೆ ಈ ದೇಶವನ್ನು ಶಾಶ್ವತ ಸೊತ್ತನ್ನಾಗಿ ಕೊಡುವೆನು’” ಎಂದು ಹೇಳಿದನು.
1512  GEN 50:5  ‘ನನ್ನ ತಂದೆಯು, ತಾನು ಕಾನಾನ್ ದೇಶದಲ್ಲಿ ಸಿದ್ಧ ಮಾಡಿಕೊಂಡಿರುವ ಸ್ಥಳದಲ್ಲಿಯೇ ತನಗೆ ಸಮಾಧಿ ಮಾಡಬೇಕೆಂದು ಸಾಯುವುದಕ್ಕಿಂತ ಮೊದಲು ನನ್ನಿಂದ ಪ್ರಮಾಣ ಮಾಡಿಸಿದನು. ಆದ್ದರಿಂದ ನನ್ನ ಮೇಲೆ ಕಟಾಕ್ಷವಿದ್ದರೆ ನೀವು ಈ ಸಂಗತಿಯನ್ನು ಫರೋಹನಿಗೆ ತಿಳಿಸಿ ನಾನು ಹೋಗಿ ತಂದೆಗೆ ಸಮಾಧಿ ಮಾಡಿ ಬರುವುದಕ್ಕೆ ಅಪ್ಪಣೆ ಕೊಡಿಸಬೇಕೆಂದು ಬೇಡಿಕೊಳ್ಳುತ್ತೇನೆ’” ಎಂದನು.
1625  EXO 4:23  ಹಾಗೂ ನನ್ನ ಮಗನು ನಿನ್ನ ದೇಶದಿಂದ ಹೊರಟು ನನ್ನನ್ನು ಆರಾಧಿಸುವುದಕ್ಕೆ ಅವನಿಗೆ ಅಪ್ಪಣೆಕೊಡಬೇಕು. ಅದಕ್ಕೆ ನೀನು ಒಪ್ಪದೇ ಹೋದರೆ, ನಾನು ನಿನಗಿರುವ ಚೊಚ್ಚಲಮಗನನ್ನು ಸಾಯಿಸುವೆನೆಂದು ಯೆಹೋವನು ಹೇಳುತ್ತಾನೆ’” ಎಂದು ತಿಳಿಸಬೇಕು.
1727  EXO 8:12  ತರುವಾಯ ಯೆಹೋವನು ಮೋಶೆಯ ಸಂಗಡ ಮಾತನಾಡಿ, “ನೀನು ಆರೋನನಿಗೆ, ‘ನಿನ್ನ ಕೋಲನ್ನು ಚಾಚಿ ಭೂಮಿಯ ಧೂಳನ್ನು ಹೊಡೆ, ಆಗ ಐಗುಪ್ತ ದೇಶದ ಭೂಮಿಯಲ್ಲಿದ್ದ ಧೂಳೆಲ್ಲಾ ಹೇನುಗಳಾಗುವುದು’” ಎಂದನು.
1762  EXO 9:19  ಆದಕಾರಣ ನೀನು ಆಳುಗಳನ್ನು ಕಳುಹಿಸಿ ನಿನ್ನ ಪಶುಗಳನ್ನೂ, ನಿನಗೆ ಹೊಲದಲ್ಲಿರುವುದೆಲ್ಲವನ್ನೂ ಬೇಗ ಭದ್ರಪಡಿಸು. ಮನೆಯೊಳಗೆ ಬಾರದೆ ಬಯಲಿನಲ್ಲೇ ಇರುವ ಎಲ್ಲಾ ಮನುಷ್ಯರೂ, ಪಶುಗಳೂ ಆ ಕಲ್ಲಿನ ಮಳೆಯ ಹೊಡೆತದಿಂದ ಸಾಯುವರು’” ಎಂದು ಹೇಳಿದನು.
1784  EXO 10:6  ಅವು ನಿನ್ನ ಮನೆಗಳಲ್ಲಿಯೂ, ನಿನ್ನ ಪರಿವಾರದವರ ಮನೆಗಳಲ್ಲಿಯೂ, ಐಗುಪ್ತ್ಯರೆಲ್ಲರ ಮನೆಗಳಲ್ಲಿಯೂ ತುಂಬಿಕೊಂಡಿರುವವು. ನಿಮ್ಮ ಪೂರ್ವಿಕರ ಕಾಲದಿಂದ ಇಂದಿನವರೆಗೂ ಅಂಥ ಮಿಡತೆಯ ದಂಡನ್ನು ಎಂದೂ ಅವರು ನೋಡಿರುವುದಿಲ್ಲ’” ಎಂದು ಹೇಳಿದರು. ಇದನ್ನು ಹೇಳಿ ಮೋಶೆ ತಿರುಗಿಕೊಂಡು ಫರೋಹನ ಬಳಿಯಿಂದ ಹೊರಟುಹೋದನು.
1837  EXO 12:20  ನೀವು ನಿಮ್ಮ ಮನೆಗಳಲ್ಲಿ ಹುಳಿಯಿಲ್ಲದ ರೊಟ್ಟಿಗಳನ್ನು ತಿನ್ನಬೇಕೇ ಹೊರತು, ಹುಳಿಕಲಸಿದ ಯಾವುದನ್ನೂ ತಿನ್ನಕೂಡದು’” ಎಂದು ಆಜ್ಞಾಪಿಸಿದನು.
1844  EXO 12:27  ನೀವು ಅವರಿಗೆ, ‘ಯೆಹೋವನು ಐಗುಪ್ತ್ಯರನ್ನು ಸಂಹರಿಸಿದಾಗ ಐಗುಪ್ತ ದೇಶದಲ್ಲಿದ್ದ ಇಸ್ರಾಯೇಲರ ಮನೆಗಳಲ್ಲಿ ಪ್ರವೇಶಿಸದೆ ಮುಂದಕ್ಕೆ ದಾಟಿ ನಮ್ಮ ಮನೆಯವರನ್ನು ಉಳಿಸಿದ್ದರಿಂದ ನಾವು ಯೆಹೋವನ ಪಸ್ಕವೆಂಬ ಈ ಆಚರಣೆಯನ್ನು ನಡೆಸಲೇಬೇಕು ಎಂದು ಹೇಳಬೇಕು’” ಎಂದನು. ಆಗ ಜನರು ತಲೆಬಾಗಿ ಯೆಹೋವನಿಗೆ ನಮಸ್ಕರಿಸಿದರು.
1883  EXO 13:15  ಫರೋಹನು ಹಠಹಿಡಿದು ನಮ್ಮನ್ನು ಹೋಗಗೊಡಿಸದೇ ಇದ್ದಾಗ ಯೆಹೋವನು ಐಗುಪ್ತ ದೇಶದಲ್ಲಿ ಮನುಷ್ಯರ ಚೊಚ್ಚಲಮಕ್ಕಳನ್ನು, ಪಶುಗಳ ಚೊಚ್ಚಲು ಮರಿಗಳನ್ನು ಅಂತೂ ಆ ದೇಶದಲ್ಲಿ ಚೊಚ್ಚಲಾಗಿದ್ದ ಎಲ್ಲವನ್ನು ಸಂಹಾರ ಮಾಡಿದನು. ಆದಕಾರಣ ಗಂಡಾಗಿ ಹುಟ್ಟುವ ಪ್ರಥಮ ಗರ್ಭಫಲವನ್ನೆಲ್ಲಾ ನಾವು ಯೆಹೋವನಿಗೆ ಸಮರ್ಪಿಸುವುದುಂಟು. ಮನುಷ್ಯರಿಂದಾದ ಪ್ರಥಮ ಗರ್ಭಫಲವನ್ನಾದರೋ ಅದನ್ನು ಬದಲುಕೊಟ್ಟು ಬಿಡಿಸುತ್ತೇವೆ’” ಎಂದು ಹೇಳಬೇಕು.
1957  EXO 16:9  ಮೋಶೆಯು ಆರೋನನಿಗೆ, “ನೀನು ಇಸ್ರಾಯೇಲರ ಸಮೂಹದ ಬಳಿಗೆ ಹೋಗಿ ಅವರಿಗೆ, ‘ಯೆಹೋವನು ನಿಮ್ಮ ಗುಣುಗುಟ್ಟುವಿಕೆಯನ್ನು ಕೇಳಿದ್ದಾನೆ. ಆದುದರಿಂದ ನೀವೆಲ್ಲರೂ ಆತನ ಸನ್ನಿಧಿಗೆ ಒಟ್ಟಾಗಿ ಸೇರಿ ಬರಬೇಕೆಂದು ಆಜ್ಞಾಪಿಸು’” ಎಂದು ಹೇಳಿದನು.
1960  EXO 16:12  “ಇಸ್ರಾಯೇಲರ ಗುಣುಗುಟ್ಟುವಿಕೆಯು ನನಗೆ ಕೇಳಿಸಿತು. ನೀನು ಅವರಿಗೆ, ‘ನೀವು ಸಾಯಂಕಾಲದಲ್ಲಿ ಮಾಂಸವನ್ನೂ, ಮುಂಜಾನೆಯಲ್ಲಿ ಬೇಕಾದಷ್ಟು ರೊಟ್ಟಿಯನ್ನೂ ತಿನ್ನುವಿರಿ. ಇದರಿಂದ ನಾನು ನಿಮ್ಮ ದೇವರಾದ ಯೆಹೋವನು ಎಂಬುದು ನಿಮಗೆ ಗೊತ್ತಾಗುವುದೆಂದು ಹೇಳಬೇಕು’” ಎಂಬುದೇ.
1971  EXO 16:23  ಅದಕ್ಕೆ ಅವನು, “ಇದು ಯೆಹೋವನು ಹೇಳಿದ ಮಾತು, ‘ನಾಳೆ ಯೆಹೋವನಿಗೆ ವಿಶ್ರಾಂತಿಯ ಪರಿಶುದ್ಧ ಸಬ್ಬತ ದಿನವಾಗಿದೆ. ಈ ದಿನವೇ ಸುಡಬೇಕಾದದ್ದನ್ನು ಸುಟ್ಟು, ಬೇಯಿಸಬೇಕಾದದ್ದನ್ನು ಬೇಯಿಸಿರಿ. ಇದರಲ್ಲಿ ಮಿಕ್ಕಾದದ್ದನ್ನೆಲ್ಲಾ ನಾಳೆಯವರೆಗೆ ಇಟ್ಟುಕೊಳ್ಳಿರಿ’” ಎಂದನು.
1980  EXO 16:32  ಮೋಶೆಯು ಜನರಿಗೆ, “ಯೆಹೋವನು ಆಜ್ಞಾಪಿಸಿದ್ದು ಇದೇ, ‘ನಾನು ಐಗುಪ್ತ ದೇಶದಿಂದ ನಿಮ್ಮನ್ನು ಹೊರಗೆ ಬರಮಾಡಿದಾಗ ಮರುಭೂಮಿಯಲ್ಲಿ ತಿನ್ನುವುದಕ್ಕೆ ಕೊಟ್ಟ ಆಹಾರವನ್ನು ನಿಮ್ಮ ಸಂತಾನದವರು ನೋಡುವ ಹಾಗೆ ಅವರಿಗಾಗಿ ನೀವು ಒಂದು ಸೇರು ಮನ್ನವನ್ನು ತುಂಬಿಸಿ ಸುರಕ್ಷಿತವಾಗಿ ಇಟ್ಟುಕೊಳ್ಳಬೇಕು’” ಎಂದು ಹೇಳಿದನು.
2050  EXO 19:23  ಅದಕ್ಕೆ ಮೋಶೆ ಯೆಹೋವನಿಗೆ, “ಜನರು ಸೀನಾಯಿ ಬೆಟ್ಟವನ್ನೇರುವುದಕ್ಕೆ ಆಗುವುದಿಲ್ಲ. ಯಾಕೆಂದರೆ ‘ಬೆಟ್ಟದ ಸುತ್ತಲೂ ಗಡಿಯನ್ನು ಹಾಕಿ ನಿನಗಾಗಿ ಶುದ್ಧಮಾಡು’” ಎಂದು ಆಜ್ಞಾಪಿಸಿರುವೆಯಲ್ಲಾ ಎಂದನು.
2078  EXO 20:26  ಅದಲ್ಲದೆ ನನ್ನ ಯಜ್ಞವೇದಿಯನ್ನು ನಿಮ್ಮ ನಗ್ನತೆಯು ಕಾಣುವ ಹಾಗೆ ಮೆಟ್ಟಲುಗಳನ್ನು ಬಳಸಿ ಅದನ್ನು ಹತ್ತಬಾರದು’” ಎಂದು ಆಜ್ಞಾಪಿಸಿದನು.
2447  EXO 32:8  ನಾನು ಅವರಿಗೆ ಅಜ್ಞಾಪಿಸಿದ ಮಾರ್ಗವನ್ನು ಅವರು ಬೇಗನೇ ಬಿಟ್ಟು ಹೋಗಿ ತಮಗೆ ಎರಕ ಹೊಯ್ದ ಹೋರಿಕರುವನ್ನು ಮಾಡಿಸಿಕೊಂಡು ಅದಕ್ಕೆ ಅಡ್ಡಬಿದ್ದು ಯಜ್ಞಗಳನ್ನು ಅರ್ಪಿಸಿ, ‘ಇಸ್ರಾಯೇಲ್ಯರೇ ನೋಡಿರಿ ಇದೇ ನಿಮ್ಮನ್ನು ಐಗುಪ್ತದೇಶದಿಂದ ಕರೆದುಕೊಂಡು ಬಂದ ದೇವರು ಎಂದು ಹೇಳಿಕೊಳ್ಳುತ್ತಿದ್ದಾರೆ’” ಎಂದು ಹೇಳಿದನು.
2452  EXO 32:13  ನಿನ್ನ ಸೇವಕರಾದ ಅಬ್ರಹಾಮ್, ಇಸಾಕ್ ಹಾಗು ಯಾಕೋಬರನ್ನು ನೆನಪಿಗೆ ತಂದುಕೋ. ನೀನು ನಿನ್ನ ಜೀವದಾಣೆ ಪ್ರಮಾಣ ಮಾಡಿ ಅವರಿಗೆ, ‘ನಾನು ನಿಮ್ಮ ಸಂತತಿಯನ್ನು ಹೆಚ್ಚಿಸಿ ಆಕಾಶದ ನಕ್ಷತ್ರಗಳಷ್ಟು ಅಸಂಖ್ಯವಾಗಿ ಈ ಪ್ರದೇಶವನ್ನೆಲ್ಲಾ ನಿಮ್ಮ ಸಂತತಿಯವರಿಗೆ ಕೊಡುವೆನೆಂದೂ ಇಸ್ರಾಯೇಲರು ಈ ದೇಶವನ್ನು ಶಾಶ್ವತವಾಗಿ ಸ್ವಾಧೀನ ಮಾಡಿಕೊಳ್ಳುವರೆಂದೂ ಮಾತುಕೊಡಲಿಲ್ಲವೇ’” ಅಂದನು.
2466  EXO 32:27  ಮೋಶೆ ಅವರಿಗೆ, “ಇಸ್ರಾಯೇಲರ ದೇವರಾದ ಯೆಹೋವನು ಅಪ್ಪಣೆಮಾಡುವುದೇನೆಂದರೆ, ‘ನಿಮ್ಮಲ್ಲಿ ಪ್ರತಿಯೊಬ್ಬನೂ ಕತ್ತಿಯನ್ನು ಸೊಂಟಕ್ಕೆ ಕಟ್ಟಿಕೊಂಡು ಪಾಳೆಯದ ಮಧ್ಯದಲ್ಲಿ ಒಂದು ಬಾಗಿಲಿನಿಂದ ಮತ್ತೊಂದು ಬಾಗಿಲಿನ ವರೆಗೂ ಹೋಗುತ್ತಾ ಬರುತ್ತಾ ತಮ್ಮತಮ್ಮ ಸಹೋದರ, ಗೆಳೆಯ ಮತ್ತು ನೆರೆಯವ ಎಂದು ಲಕ್ಷಿಸದೆ ಜನರನ್ನು ಸಂಹರಿಸಬೇಕು’” ಎಂದು ಹೇಳಿದನು.
2479  EXO 33:5  ಯೆಹೋವನು ಮೋಶೆಗೆ ಹೀಗೆಂದನು. “ನೀನು ಇಸ್ರಾಯೇಲರಿಗೆ ಹೇಳಬೇಕಾದದ್ದೇನೆಂದರೆ, ‘ನೀವು ಮೊಂಡುತನವುಳ್ಳ ಜನರು, ನಾನು ಒಂದು ಕ್ಷಣ ಮಾತ್ರ ನಿಮ್ಮ ಮಧ್ಯದಲ್ಲಿ ಬರುವುದಾದರೆ, ನಾನು ನಿಮ್ಮನ್ನು ನಿರ್ಮೂಲ ಮಾಡಿಬಿಡುವೆನು. ಆದಕಾರಣ ನಿಮ್ಮ ಆಭರಣಗಳನ್ನು ಈಗ ತೆಗೆದುಬಿಡಿರಿ. ನಿಮಗೆ ನಾನು ಏನು ಮಾಡಬೇಕೆಂಬುದನ್ನು ಆಲೋಚಿಸಿಕೊಳ್ಳುವೆನು’” ಅಂದನು.
2796  LEV 3:17  ಕೊಬ್ಬನ್ನಾಗಲಿ ಅಥವಾ ರಕ್ತವನ್ನಾಗಲಿ ತಿನ್ನಬಾರದೆಂಬುದು ನಿಮಗೂ ಮತ್ತು ನಿಮ್ಮ ಸಂತತಿಯವರಿಗೂ ನೀವು ವಾಸಿಸುವ ಎಲ್ಲಾ ಸ್ಥಳಗಳಲ್ಲಿಯೂ ಶಾಶ್ವತವಾದ ನಿಯಮವಾಗಿದೆ’” ಅಂದನು.
2868  LEV 6:11  ಆರೋನನ ವಂಶದವರಾದ ಗಂಡಸರೆಲ್ಲರೂ ಅದನ್ನು ತಿನ್ನಬಹುದು. ಯೆಹೋವನಿಗೆ ಹೋಮವಾಗಿ ಅರ್ಪಿತವಾದ ದ್ರವ್ಯಗಳಲ್ಲಿ ಅದು ನಿಮಗೂ ಮತ್ತು ನಿಮ್ಮ ಸಂತತಿಯವರಿಗೂ ಸಲ್ಲತಕ್ಕದ್ದೆಂಬುದು ಶಾಶ್ವತನಿಯಮ. ಆ ದ್ರವ್ಯಗಳಿಗೆ ತಗಲಿದ್ದೆಲ್ಲಾ ಪರಿಶುದ್ಧವಾಗುವುದು’” ಎಂದು ಹೇಳಿದನು.
2901  LEV 7:21  ಯಾವನಿಗಾದರೂ ಮನುಷ್ಯದೇಹದಿಂದ ಉಂಟಾದ ಅಶುದ್ಧವಸ್ತು ಅಥವಾ ಅಶುದ್ಧ ಮೃಗ ಮತ್ತು ನಿಷಿದ್ಧವಸ್ತು ಇವುಗಳಲ್ಲಿ ಯಾವುದಾದರೂ ಸೋಂಕಿದರೆ ಮತ್ತು ಅವನು ಯೆಹೋವನಿಗೆ ಸಮರ್ಪಿತವಾದ ಯಜ್ಞಪಶುವಿನ ಮಾಂಸವನ್ನು ತಿಂದರೆ ತನ್ನ ಕುಲದಿಂದ ಬಹಿಷ್ಕರಿಸಲ್ಪಡಬೇಕು’” ಎಂದು ಹೇಳಿದನು.
2907  LEV 7:27  ರಕ್ತಭೋಜನವನ್ನು ಮಾಡಿದವನು ಕುಲದಿಂದ ಬಹಿಷ್ಕಾರಕ್ಕೆ ಒಳಗಾಗುವನು’” ಎಂದು ಹೇಳಿದನು.
2914  LEV 7:34  ಇಸ್ರಾಯೇಲರು ಸಮಾಧಾನಯಜ್ಞಪಶುವಿನ ಮಾಂಸದಲ್ಲಿ ನೈವೇದ್ಯರೂಪವಾಗಿ ನಿವಾಳಿಸುವ ಎದೆಯ ಭಾಗವನ್ನು ಮತ್ತು ಯಾಜಕನಿಗೋಸ್ಕರ ಪ್ರತ್ಯೇಕಿಸುವ ತೊಡೆಯನ್ನು ನಾನು ತೆಗೆದುಕೊಂಡು ಮಹಾಯಾಜಕನಾದ ಆರೋನನಿಗೂ ಹಾಗು ಅವನ ವಂಶದವರಿಗೂ ಕೊಟ್ಟು ಇವು ಇಸ್ರಾಯೇಲರಿಂದ ಯಾಜಕರಿಗೆ ಯಾವಾಗಲೂ ಸಲ್ಲಬೇಕೆಂದು ಶಾಶ್ವತವಾದ ನಿಯಮವನ್ನು ಮಾಡಿದ್ದೇನೆ’” ಎಂದು ಹೇಳಿದನು.
2958  LEV 9:4  ಕುರಿಯನ್ನು ಸಮಾಧಾನಯಜ್ಞಕ್ಕಾಗಿ ಒಂದು ಹೋರಿಯನ್ನು, ಟಗರನ್ನು ಧಾನ್ಯನೈವೇದ್ಯಕ್ಕಾಗಿ ಎಣ್ಣೆಮಿಶ್ರವಾದ ಪದಾರ್ಥವನ್ನು ತೆಗೆದುಕೊಂಡು ಯೆಹೋವನ ಮುಂದೆ ಬರಬೇಕೆಂದು ಆಜ್ಞಾಪಿಸು’” ಅಂದನು.
2981  LEV 10:3  ಆಗ ಮೋಶೆ ಆರೋನನಿಗೆ, “ಯೆಹೋವನು ಹೇಳಿದ ಮಾತಿಗೆ ಇದೇ ದೃಷ್ಟಾಂತ; ಆ ಮಾತು ಏನೆಂದರೆ, ‘ನಾನು ಪರಿಶುದ್ಧನೆಂಬುದನ್ನು ನನ್ನ ಬಳಿಯಲ್ಲಿರುವವರ ಮೂಲಕವಾಗಿಯೇ ತೋರ್ಪಡಿಸುವೆನು, ಜನರೆಲ್ಲರಿಗೆ ತಿಳಿಯುವಂತೆ ನನ್ನ ಘನತೆಯನ್ನು ಸ್ಥಾಪಿಸುವೆನು ಎಂಬುದೇ’” ಎಂದು ಹೇಳಿದನು. ಅದಕ್ಕೆ ಆರೋನನು ಮೌನವಾಗಿದ್ದನು.
3053  LEV 12:8  ಕುರಿಯನ್ನು ಕೊಡುವುದಕ್ಕೆ ಗತಿಯಿಲ್ಲದಿದ್ದರೆ ಅವಳು ಎರಡು ಬೆಳವಕ್ಕಿಗಳನ್ನಾಗಲಿ ಅಥವಾ ಎರಡು ಪಾರಿವಾಳದ ಮರಿಗಳನ್ನಾಗಲಿ ತಂದು ಸರ್ವಾಂಗಹೋಮಕ್ಕಾಗಿ ಒಂದನ್ನು, ದೋಷಪರಿಹಾರಕ್ಕಾಗಿ ಮತ್ತೊಂದನ್ನು ಸಮರ್ಪಿಸಬೇಕು. ಯಾಜಕನು ಅವಳಿಗೋಸ್ಕರ ದೋಷಪರಿಹಾರವನ್ನು ಮಾಡಿದಾಗ ಶುದ್ಧಳಾಗುವಳು’” ಎಂಬುದೆ.
3202  LEV 15:33  ಮುಟ್ಟಾದ ಸ್ತ್ರೀಯು, ಸ್ರಾವವುಂಟಾಗುವ ಸ್ತ್ರೀ ಮತ್ತು ಪುರುಷರು, ಅಶುದ್ಧಳಾದ ಸ್ತ್ರೀಯನ್ನು ಸಂಗಮಿಸಿದವನು ಇವರ ವಿಷಯವಾಗಿ ಇದೇ ನಿಯಮ’” ಎಂದು ಹೇಳಿದನು.
3252  LEV 17:16  ಅವನು ತನ್ನ ಬಟ್ಟೆಗಳನ್ನು ಒಗೆದುಕೊಳ್ಳದೆ ಅಥವಾ ಸ್ನಾನ ಮಾಡದೆ ಹೋದರೆ ತನ್ನ ಪಾಪದ ಫಲವನ್ನು ಅನುಭವಿಸಬೇಕು’” ಎಂದು ಹೇಳಿದನು.
3282  LEV 18:30  ಆದುದರಿಂದ ನಿಮಗಿಂತ ಮುಂಚೆ ನಡೆಯುತ್ತಿದ್ದ ಅಸಹ್ಯವಾದ ಆಚರಣೆಗಳನ್ನು ನಡೆಸಿ ನಿಮ್ಮನ್ನು ಅಶುದ್ಧಮಾಡಿಕೊಳ್ಳದೆ ನನ್ನ ನಿಯಮಗಳನ್ನೇ ಅನುಸರಿಸಿ ನಡೆಯಬೇಕು; ನಾನು ನಿಮ್ಮ ದೇವರಾದ ಯೆಹೋವನು’” ಎಂದು ಹೇಳಿದನು.
3319  LEV 19:37  ಆದುದರಿಂದ ನನ್ನ ಆಜ್ಞಾವಿಧಿಗಳನ್ನೆಲ್ಲಾ ನೀವು ಅನುಸರಿಸಿ ನಡೆಯಬೇಕು. ನಾನು ಯೆಹೋವನು’” ಎಂದು ಹೇಳಿದನು.
3346  LEV 20:27  “‘ಸತ್ತವರಲ್ಲಿ ವಿಚಾರಿಸುವವರೂ, ಬೇತಾಳಿಕರೂ ಅವರು ಸ್ತ್ರೀಯರಾಗಲಿ ಅಥವಾ ಪುರುಷರಾಗಲಿ ಅವರು ಮರಣಶಿಕ್ಷೆ ಹೊಂದಬೇಕು. ಕಲ್ಲೆಸೆದು ಅವರನ್ನು ಕೊಲ್ಲಬೇಕು, ಆ ಶಿಕ್ಷೆಗೆ ಅವರೇ ಕಾರಣರು’” ಎಂದು ಹೇಳಿದನು.
3361  LEV 21:15  ಇಲ್ಲವಾದರೆ ಅವನ ಸಂತತಿಯ ಸ್ವಜನರೊಳಗೆ ಅವನು ಅಪವಾದಕ್ಕೆ ಗುರಿಯಾಗುವನು. ಅವನನ್ನು ನನ್ನ ಸೇವೆಗೆ ಪ್ರತಿಷ್ಠಿಸಿಕೊಂಡ ಯೆಹೋವನು ನಾನು’” ಎಂದು ಹೇಳಿದನು.
3369  LEV 21:23  ಅವನಿಗೆ ಕಳಂಕವಿರುವುದರಿಂದ ತೆರೆಯನ್ನು ದಾಟಿ ಒಳಗೆ ಬರಬಾರದು; ಯಜ್ಞವೇದಿಯ ಬಳಿಗೆ ಬರಬಾರದು; ನನ್ನ ಪವಿತ್ರಸ್ಥಾನಗಳ ಗೌರವಕ್ಕೆ ಅವನಿಂದ ಕುಂದು ಉಂಟಾಗಬಾರದು; ಆ ಸ್ಥಾನಗಳನ್ನು ನನ್ನ ಸೇವೆಗೆ ಪ್ರತಿಷ್ಠಿಸಿಕೊಂಡ ಯೆಹೋವನು ನಾನು’” ಎಂದು ಹೇಳಿದನು.
3386  LEV 22:16  ಹಾಗೆ ಎಣಿಸಿದರೆ ತಾವು ಆ ನೈವೇದ್ಯಪದಾರ್ಥಗಳನ್ನು ಊಟಮಾಡುವುದರಿಂದ ಪಾಪಕ್ಕೆ ಒಳಗಾಗಿ ಶಿಕ್ಷೆಹೊಂದುವರು. ನನ್ನ ಸೇವೆಗೆ ಅವರನ್ನು ಪ್ರತಿಷ್ಠಿಸಿಕೊಂಡ ಯೆಹೋವನು ನಾನು’” ಎಂದು ಹೇಳಿದನು.
3395  LEV 22:25  ಅನ್ಯದೇಶದವನಿಂದ ತೆಗೆದುಕೊಂಡ ಅಂತಹ ಪಶುವನ್ನು ನಿಮ್ಮ ದೇವರಿಗೆ ಆಹಾರವಾಗಿ ಒಪ್ಪಿಸಬಾರದು; ಅದು ಕುಂದುಳ್ಳದ್ದು, ಪೂರ್ಣಾಂಗವಾದುದಲ್ಲ; ಆದಕಾರಣ ಸಮರ್ಪಣೆ ಆಗುವುದಿಲ್ಲ’” ಅಂದನು.
3411  LEV 23:8  ಏಳು ದಿನಗಳಲ್ಲಿಯೂ ನೀವು ಯೆಹೋವನಿಗೆ ಹೋಮವನ್ನು ಸಮರ್ಪಿಸಬೇಕು. ಏಳನೆಯ ದಿನದಲ್ಲಿ ದೇವಾರಾಧನೆಗಾಗಿ ಸಭೆಸೇರಬೇಕು. ಆ ದಿನದಲ್ಲಿ ಯಾವ ಉದ್ಯೋಗವನ್ನು ಮಾಡಬಾರದು’” ಅಂದನು.
3425  LEV 23:22  “‘ನಿಮ್ಮ ದೇಶದ ಪೈರನ್ನು ಕೊಯ್ಯುವಾಗ ಹೊಲಗಳ ಮೂಲೆಗಳಲ್ಲಿರುವುದನ್ನೆಲ್ಲಾ ಕೊಯ್ಯಬಾರದು ಮತ್ತು ಹಕ್ಕಲಾಯಬಾರದು. ಇವುಗಳನ್ನು ಬಡವರಿಗೋಸ್ಕರವು ಹಾಗು ಪರದೇಶದವರಿಗೋಸ್ಕರವು ಬಿಟ್ಟುಬಿಡಬೇಕು. ನಾನು ನಿಮ್ಮ ದೇವರಾಗಿರುವ ಯೆಹೋವನು’” ಎಂದು ಹೇಳಿದನು.
3428  LEV 23:25  ಆ ದಿನದಲ್ಲಿ ಯಾವ ಉದ್ಯೋಗವನ್ನು ನಡೆಸಬಾರದು; ಯೆಹೋವನಿಗೆ ಹೋಮವನ್ನು ಮಾಡಬೇಕು’” ಅಂದನು.
3446  LEV 23:43  ನಾನು ನಿಮ್ಮನ್ನು ಐಗುಪ್ತ ದೇಶದಿಂದ ಬರಮಾಡಿದಾಗ ಇಸ್ರಾಯೇಲರು ಪರ್ಣಶಾಲೆಗಳಲ್ಲಿ ವಾಸವಾಗಿರುವಂತೆ ಮಾಡಿದೆನೆಂಬುದಾಗಿ ಇದರಿಂದ ನಿಮ್ಮ ಸಂತತಿಯವರಿಗೆ ತಿಳಿಯುವುದು. ನಾನು ನಿಮ್ಮ ದೇವರಾದ ಯೆಹೋವನು’” ಅಂದನು.
3469  LEV 24:22  ಅನ್ಯರಿಗಾಗಲಿ ಅಥವಾ ಸ್ವದೇಶದವರಿಗಾಗಲಿ ಪಕ್ಷಪಾತವಿಲ್ಲದೆ ಒಂದೇ ನಿಯಮವಿರಬೇಕು. ನಾನು ನಿಮ್ಮ ದೇವರಾದ ಯೆಹೋವನು’” ಎಂಬುದೇ.
3525  LEV 25:55  ಏಕೆಂದರೆ ಇಸ್ರಾಯೇಲರು ನನ್ನ ದಾಸರೇ; ನಾನು ಅವರನ್ನು ಐಗುಪ್ತದೇಶದೊಳಗಿಂದ ಬರಮಾಡಿದೆನಲ್ಲವೇ. ನಾನು ನಿಮ್ಮ ದೇವರಾದ ಯೆಹೋವನು’” ಎಂದು ಹೇಳಿದನು.
3604  LEV 27:33  ಆ ಪಶುವು ಒಳ್ಳೇದೋ ಅಥವಾ ಕೆಟ್ಟದ್ದೋ ಎಂದು ನೋಡಬಾರದು; ಅದನ್ನು ಬದಲಾಯಿಸಬಾರದು. ಕೊಡಬೇಕಾದವನು ಅದನ್ನು ಬದಲಾಯಿಸಿದ್ದಾದರೆ ಅವನು ಮೊದಲು ಲೆಕ್ಕಿಸಿದ್ದೂ ಮತ್ತು ಅದಕ್ಕೆ ಬದಲಾಗಿ ಇಟ್ಟದ್ದೂ ಎರಡೂ ಯೆಹೋವನದಾಗಿರಬೇಕು; ಅದನ್ನು ಬಿಡಿಸಿಕೊಳ್ಳುವ ಅಧಿಕಾರವಿರುವುದಿಲ್ಲ’” ಎಂದು ಹೇಳಿದನು.
4144  NUM 14:35  ಇದು ಯೆಹೋವನೆಂಬ ನಾನೇ ಹೇಳಿದ ಮಾತು. ನನಗೆ ವಿರುದ್ಧವಾಗಿ ಸೇರಿರುವ ಈ ದುಷ್ಟ ಸಮೂಹದವರೆಲ್ಲರಿಗೆ ಈ ಮಾತಿನ ಪ್ರಕಾರವೇ ಮಾಡುತ್ತೇನೆ. ಈ ಅರಣ್ಯದಲ್ಲಿಯೇ ಇವರೆಲ್ಲರೂ ಸಾಯಬೇಕು’” ಎಂದು ಹೇಳಿದನು.
4250  NUM 17:20  ನಾನು ಯಾರನ್ನು ಆಯ್ದುಕೊಳ್ಳುತ್ತೇನೋ ಅವನ ಕೋಲು ಚಿಗುರುವುದು. ಇಸ್ರಾಯೇಲರು ನಿಮ್ಮಿಬ್ಬರ ವಿರುದ್ಧವಾಗಿ ಗುಣುಗುಟ್ಟುವುದನ್ನು ನಾನು ನಿಲ್ಲಿಸಿ ಬಿಡುವೆನು’” ಎಂದನು.
4282  NUM 18:24  ಇಸ್ರಾಯೇಲರು ಪ್ರತ್ಯೇಕಿಸಿ ಯೆಹೋವನಿಗೆ ಸಮರ್ಪಿಸುವ ಹತ್ತನೆಯ ಒಂದು ಭಾಗವನ್ನು ಲೇವಿಯರಿಗೆ ಸ್ವತ್ತಾಗಿ ಕೊಟ್ಟಿದ್ದೇನೆ. ಆದುದರಿಂದ ಲೇವಿಯರಿಗೆ ‘ಇತರ ಇಸ್ರಾಯೇಲರೊಂದಿಗೆ ಪಾಲು ದೊರೆಯುವುದಿಲ್ಲ’” ಎಂದು ಹೇಳಿದ ಮಾತಿಗೆ ಇದೇ ಕಾರಣ.
4290  NUM 18:32  ಅದರಲ್ಲಿ ಉತ್ತಮ ಭಾಗವನ್ನು ಯೆಹೋವನಿಗೋಸ್ಕರ ಪ್ರತ್ಯೇಕಿಸಿದ ನಂತರ ನೀವು ಉಳಿದ ವಿಷಯದಲ್ಲಿ ಯಾವ ದೋಷಕ್ಕೂ ಗುರಿಯಾಗುವುದಿಲ್ಲ. ಇಸ್ರಾಯೇಲರು ಸಮರ್ಪಿಸುವ ದೇವರ ವಸ್ತುಗಳನ್ನು ಅಪವಿತ್ರಮಾಡಿದರೆ ನೀವು ಸಾಯುವಿರಿ’” ಎಂದನು.
4387  NUM 22:11  ‘ಒಂದು ಜನಾಂಗವು ಐಗುಪ್ತ ದೇಶದಿಂದ ಹೊರಟು ಬಂದಿದೆ. ಅವರು ಭೂಮಿಯನ್ನೆಲ್ಲಾ ಆವರಿಸಿಕೊಂಡಿದ್ದಾರೆ; ನೀನು ಬಂದು ಅವರಿಗೆ ಶಾಪಕೊಡಬೇಕು; ಕೊಟ್ಟರೆ ಅವರನ್ನು ಸೋಲಿಸಿ ಹೊರಡಿಸಿಬಿಡುವುದಕ್ಕೆ ನನ್ನಿಂದ ಆಗುವುದು’” ಎಂದು ಹೇಳಿಕಳುಹಿಸಿದ್ದಾನೆ ಎಂದು ಉತ್ತರಕೊಟ್ಟನು.
4393  NUM 22:17  ಏಕೆಂದರೆ ನಾನು ನಿನ್ನನ್ನು ಬಹಳವಾಗಿ ಘನಪಡಿಸುವೆನು. ನೀನು ಏನು ಹೇಳಿದರೂ ಅದನ್ನು ಮಾಡುತ್ತೇನೆ. ನೀನು ದಯಮಾಡಿ ಬಂದು ಈ ಜನರನ್ನು ನನಗಾಗಿ ಶಪಿಸಬೇಕು’” ಎಂದನು.
4732  NUM 32:12  ಕೆನಿಜ್ಜೀಯನಾದ ಯೆಫುನ್ನೆಯ ಮಗನಾದ ಕಾಲೇಬನೂ ಮತ್ತು ನೂನನ ಮಗನಾದ ಯೆಹೋಶುವನೂ ಇವರಿಬ್ಬರೇ ಹೊರತು ಯಾರೂ ನೋಡುವುದೇ ಇಲ್ಲ’” ಎಂದು ಖಂಡಿತವಾಗಿ ಹೇಳಿದನು.
4830  NUM 34:12  ಅಲ್ಲಿಂದ ಅದು ಯೊರ್ದನ್ ನದಿಗೆ ಇಳಿದು ಅದನ್ನು ಅನುಸರಿಸಿ ಲವಣಸಮುದ್ರದ ಬಳಿಯಲ್ಲಿ ಮುಗಿಯಬೇಕು. ಇವೇ ನಿಮ್ಮ ದೇಶದ ಮೇರೆಗಳು’” ಎಂದನು.
4902  DEU 1:8  ಆ ದೇಶವನ್ನು ನಿಮಗೇ ಕೊಟ್ಟಿದ್ದೇನೆ. ಯೆಹೋವನೆಂಬ ನಾನು ನಿಮ್ಮ ಪೂರ್ವಿಕರಾದ ಅಬ್ರಹಾಮ್, ಇಸಾಕ್, ಯಾಕೋಬರಿಗೂ ಮತ್ತು ಅವರ ಸಂತತಿಯವರಿಗೂ ಆ ದೇಶವನ್ನು ಕೊಡುತ್ತೇನೆಂದು ಪ್ರಮಾಣಪೂರ್ವಕವಾಗಿ ವಾಗ್ದಾನ ಮಾಡಿದೆನಲ್ಲಾ. ಅದರಲ್ಲಿ ಪ್ರವೇಶಮಾಡಿ ಸ್ವಾಧೀನಮಾಡಿಕೊಳ್ಳಿರಿ’” ಎಂದು ಅಜ್ಞಾಪಿಸಿದನು.
4947  DEU 2:7  ನೀವು ಕೈಹಾಕಿದ ಎಲ್ಲಾ ಕೆಲಸಗಳನ್ನೂ ನಿಮ್ಮ ದೇವರಾದ ಯೆಹೋವನು ಸಫಲಪಡಿಸಿದ್ದಾನಲ್ಲಾ. ಈ ದೊಡ್ಡ ಅರಣ್ಯದಲ್ಲಿ ನೀವು ಸಂಚರಿಸುತ್ತಿರುವಾಗೆಲ್ಲಾ ಆತನು ನಿಮ್ಮನ್ನು ಪರಾಂಬರಿಸುತ್ತಾ ಬಂದನು. ಈ ನಲ್ವತ್ತು ವರ್ಷ ನಿಮ್ಮ ದೇವರಾದ ಯೆಹೋವನು ನಿಮ್ಮ ಸಂಗಡ ಇದ್ದುದರಿಂದ ನಿಮಗೆ ಏನೂ ಕೊರತೆಯಾಗಲಿಲ್ಲ’” ಎಂದು ಹೇಳಿದನು.
5819  DEU 33:7  “ಯೆಹೂದ ಕುಲದ ವಿಷಯದಲ್ಲಿ, ‘ಯೆಹೋವನೇ, ಯೆಹೂದ ಕುಲದವರ ಮೊರೆಯನ್ನು ಲಾಲಿಸಿ ಅವರನ್ನು ಅವರ ಬಂಧುಗಳೊಡನೆ ಸೇರಿಸು. ಅವರಿಗೋಸ್ಕರ ಯುದ್ಧಮಾಡಿದರಲ್ಲಾ; ಅವರ ಶತ್ರುಗಳಿಂದ ಅವರನ್ನು ರಕ್ಷಿಸು’” ಎಂದು ಹೇಳಿದನು.
5993  JOS 7:15  ಯಾವನು ಮೀಸಲಾದ ವಸ್ತುಗಳನ್ನು ತೆಗೆದುಕೊಂಡವನೆಂದು ಹಿಡಿಯಲ್ಪಡುತ್ತಾನೋ ಅವನು ಯೆಹೋವನ ನಿಬಂಧನೆಯನ್ನು ಮೀರಿ ಇಸ್ರಾಯೇಲರಲ್ಲಿ ಬುದ್ಧಿಹೀನಕಾರ್ಯ ನಡಿಸಿದ್ದರಿಂದ ತನ್ನ ಎಲ್ಲಾ ಆಸ್ತಿ ಸಹಿತವಾಗಿ ಸುಡಲ್ಪಡಬೇಕು’” ಎಂದು ಹೇಳು ಎಂಬುದೇ.
6052  JOS 9:13  ನಾವು ದ್ರಾಕ್ಷಾರಸ ತುಂಬಿಸಿಕೊಂಡಿದ್ದ ಈ ಬುದ್ದಲಿಗಳು ಹೊಸದಾಗಿದ್ದವು; ಈಗ ಹರಿದುಹೋಗಿವೆ. ನಮ್ಮ ಬಟ್ಟೆಬರೆಗಳು ಹಾಗೂ ಕೆರಗಳು ದೀರ್ಘಪ್ರಯಾಣದಿಂದ ಸವೆದುಹೋಗಿವೆ’” ಎಂದು ವಿವರಿಸಿದರು.
6608  JDG 4:7  ನಾನು ಯಾಬೀನನ ಸೇನಾಧಿಪತಿಯಾದ ಸೀಸೆರನನ್ನೂ ಅವನ ಸೈನ್ಯರಥಗಳನ್ನೂ ನಿನ್ನ ಬಳಿಗೆ ಕೀಷೋನ್ ಹಳ್ಳಕ್ಕೆ ಎಳೆದುಕೊಂಡು ಬಂದು ನಿನ್ನ ಕೈಗೆ ಒಪ್ಪಿಸುವೆನು ಎಂದು ಆಜ್ಞಾಪಿಸಿದ್ದಾನೆ’” ಅಂದಳು.
6666  JDG 6:10  ಯೆಹೋವನೆಂಬ ನಾನೇ ನಿಮ್ಮ ದೇವರಾಗಿದ್ದೇನೆಂದೂ, ನೀವು ಅಮೋರಿಯರ ಮಧ್ಯದಲ್ಲಿ ವಾಸಿಸುತ್ತಿದ್ದಾಗ ಅವರ ದೇವತೆಗಳನ್ನು ಪೂಜಿಸಬಾರದೆಂದೂ ಆಜ್ಞಾಪಿಸಿದ್ದೆನು; ಆದರೆ ನೀವು ನನ್ನ ಮಾತನ್ನು ಕೇಳಲಿಲ್ಲ’” ಅಂದನು.
6699  JDG 7:3  ಆದುದರಿಂದ ಎಲ್ಲಾ ಜನರಿಗೆ ಕೇಳಿಸುವಂತೆ, ‘ಧೈರ್ಯವಿಲ್ಲದವರೂ, ಅಂಜುವವರೂ ಈ ಗಿಲ್ಯಾದ್ ಪರ್ವತವನ್ನು ಬಿಟ್ಟು ಮನೆಗೆ ಹೋಗಲಿ ಎಂದು ಪ್ರಕಟಿಸು’” ಅಂದನು. ಹಾಗೆ ಮಾಡಲು ಇಪ್ಪತ್ತೆರಡು ಸಾವಿರ ಮಂದಿ ಹಿಂದಿರುಗಿ ಹೋದರು; ಹತ್ತು ಸಾವಿರ ಮಂದಿ ಉಳಿದರು.
6714  JDG 7:18  ನಾನೂ ನನ್ನ ಸಂಗಡ ಇದ್ದವರೂ ಕೊಂಬುಗಳನ್ನು ಊದಲು ನೀವೂ ಪಾಳೆಯದ ಸುತ್ತಲೂ ಕೊಂಬನ್ನು ಊದಿ, ‘ಯೆಹೋವನಿಗೆ ಜಯ, ಗಿದ್ಯೋನನಿಗೆ ಜಯ ಎಂದು ಕೂಗಿರಿ’” ಎಂದು ಹೇಳಿದನು.
7172  RUT 2:21  ಆಗ ಮೋವಾಬ್ಯಳಾದ ರೂತಳು “ಇದಲ್ಲದೆ ಆ ಮನುಷ್ಯನು ನನಗೆ, ‘ಸುಗ್ಗಿ ಮುಗಿಯುವವರೆಗೂ ನನ್ನ ಆಳುಗಳ ಜೊತೆಯಲ್ಲೇ ಇರು ಎಂದು ಹೇಳಿದ್ದಾನೆ’” ಎಂದಳು.
7544  1SA 14:34  ಜನರ ಬಳಿಗೆ ಹೋಗಿ ಅವರಿಗೆ, ‘ರಕ್ತದೊಂದಿಗೆ ಭೋಜನ ಮಾಡಿ ಯೆಹೋವನಿಗೆ ವಿರುದ್ಧವಾಗಿ ಪಾಪಮಾಡಬೇಡಿರಿ; ನಿಮ್ಮ ನಿಮ್ಮ ಎತ್ತು ಕುರಿಗಳನ್ನು ಇಲ್ಲಿ ತಂದು, ಕೊಂದು ತಿನ್ನಬೇಕೆಂದು ಹೇಳಿರಿ’” ಅಂದನು. ಹಾಗೆಯೇ ಜನರೆಲ್ಲರೂ ತಮ್ಮ ತಮ್ಮ ಎತ್ತು ಕುರಿಗಳನ್ನು ಅದೇ ರಾತ್ರಿ ಅಲ್ಲಿಗೆ ತಂದು ಕೊಂದು ತಿಂದರು.
7565  1SA 15:3  ಈಗ ನೀನು ಹೋಗಿ ಅವರನ್ನು ಸೋಲಿಸಿ ಅವರಿಗಿರುವುದನ್ನೆಲ್ಲಾ ಸಂಪೂರ್ಣವಾಗಿ ಹಾಳುಮಾಡು. ಗಂಡಸರನ್ನೂ, ಹೆಂಗಸರನ್ನೂ, ಮಕ್ಕಳನ್ನೂ, ಶಿಶುಗಳನ್ನೂ, ಎತ್ತು, ಕುರಿ, ಕತ್ತೆ, ಒಂಟೆ, ಇವುಗಳನ್ನೂ ಕನಿಕರವಿಲ್ಲದೆ ಕೊಂದುಹಾಕು ಎಂದು ಹೇಳುತ್ತಾನೆ’” ಅಂದನು.
8137  2SA 5:2  ಹಿಂದಿನ ದಿನಗಳಲ್ಲಿ ಅಂದರೆ, ಸೌಲನ ಆಡಳಿತದಲ್ಲಿ, ಇಸ್ರಾಯೇಲರ ದಳಾಧಿಪತಿಯಾಗಿ ಹೋಗುತ್ತಾ ಬರುತ್ತಾ ಇದ್ದವನು ನೀನೇ. ನಿನ್ನನ್ನು ಕುರಿತು ಯೆಹೋವನು, ‘ನೀನು ನನ್ನ ಪ್ರಜೆಗಳಾದ ಇಸ್ರಾಯೇಲರ ನಾಯಕನೂ ಪಾಲಕನೂ ಆಗಿರುವಿಯೆಂದು ಹೇಳಿದ್ದಾನೆ’” ಅಂದರು.
8199  2SA 7:16  ನಿನ್ನ ಮನೆಯೂ ಅರಸುತನವೂ ಸದಾಕಾಲ ಸ್ಥಿರವಾಗಿರುವುದು. ನಿನ್ನ ಸಿಂಹಾಸನವು ಶಾಶ್ವತವಾಗಿರುವುದು’” ಎಂದು
8301  2SA 12:12  ನಾನು ಹೇಳುವ ಮಾತಾದರೋ ಎಲ್ಲಾ ಇಸ್ರಾಯೇಲ್ಯರ ಮುಂದೆ ಹಗಲಿನಲ್ಲೇ ನೆರವೇರುವುದು’” ಎಂದನು.
8402  2SA 15:10  ಆದರೆ ಅವನು ಗೂಢಚಾರರನ್ನು ಕಳುಹಿಸಿ ಇಸ್ರಾಯೇಲರ ಎಲ್ಲಾ ಕುಲದವರಿಗೆ, “ನೀವು ತುತ್ತೂರಿಯ ಧ್ವನಿಯನ್ನು ಕೇಳುತ್ತಲೇ ‘ಅಬ್ಷಾಲೋಮನು ಹೆಬ್ರೋನಿನಲ್ಲಿ ಅರಸನಾದನೆಂದು ಅರ್ಭಟಿಸಿರಿ’” ಎಂದು ಹೇಳಿಸಿದ್ದನು.
8771  1KI 1:51  ದೂತರು ಬಂದು ಸೊಲೊಮೋನನಿಗೆ, “ಅದೋನೀಯನು ನಿನಗೆ ಹೆದರಿ ಯಜ್ಞವೇದಿಯ ಕೊಂಬುಗಳನ್ನು ಹಿಡಿದು, ‘ಅರಸನಾದ ಸೊಲೊಮೋನನು ನನ್ನನ್ನು ಕತ್ತಿಯಿಂದ ಸಂಹರಿಸುವುದಿಲ್ಲವೆಂಬುದಾಗಿ ಈ ಹೊತ್ತು ನನಗೆ ಪ್ರಮಾಣಮಾಡಬೇಕೆಂದು ಬೇಡಿಕೊಳ್ಳುತ್ತೇನೆ’” ಎಂಬುದಾಗಿ ತಿಳಿಸಿದನು.
9334  1KI 17:14  ಇಸ್ರಾಯೇಲ್ ದೇವರಾದ ಯೆಹೋವನು ನಿನಗೆ, ‘ನಾನು ದೇಶಕ್ಕೆ ಮಳೆಯನ್ನು ಕಳುಹಿಸುವವರೆಗೆ ನಿನ್ನ ಮಡಿಕೆಯಲ್ಲಿರುವ ಹಿಟ್ಟು ತೀರುವುದಿಲ್ಲ ಮತ್ತು ಮೊಗೆಯಲ್ಲಿರುವ ಎಣ್ಣೆಯು ಮುಗಿದುಹೋಗುವುದಿಲ್ಲ’” ಎಂದು ಹೇಳುತ್ತಾನೆ.
9712  2KI 7:1  ಆಗ ಎಲೀಷನು ಅವನಿಗೆ, “ಯೆಹೋವನ ವಾಕ್ಯವನ್ನು ಕೇಳು, ಆತನು, ‘ನಾಳೆ ಈ ಹೊತ್ತಿಗೆ ಸಮಾರ್ಯ ಪಟ್ಟಣದ ಬಾಗಿಲಿನಲ್ಲಿ ಗೋದಿಹಿಟ್ಟು ರೂಪಾಯಿಗೆ ಹನ್ನೆರಡು ಸೇರಿನಂತೆಯೂ, ಜವೆಗೋದಿಯು ಇಪ್ಪತ್ತನಾಲ್ಕು ಸೇರಿನಂತೆಯೂ ಮಾರಲ್ಪಡುವುದು’” ಎನ್ನುತ್ತಾನೆ ಎಂದು ಹೇಳಿದನು.
9770  2KI 9:10  ಈಜೆಬೆಲಳ ಶವವು ಸಮಾಧಿಯನ್ನು ಸೇರುವುದಿಲ್ಲ. ನಾಯಿಗಳು ಅವಳ ಹೆಣವನ್ನು ಇಜ್ರೇಲಿನ ಹೊಲದಲ್ಲಿ ತಿಂದುಬಿಡುವವು’” ಎನ್ನುತ್ತಾನೆ ಎಂದು ಹೇಳಿ ಬಾಗಿಲನ್ನು ತೆರೆದು ಓಡಿಹೋದನು.
10053  2KI 18:25  ಈ ದೇಶವನ್ನು ಹಾಳುಮಾಡುವುದಕ್ಕೆ ಯೆಹೋವನ ಚಿತ್ತವಿಲ್ಲದೆ ಬಂದೆನೆಂದು ನೆನಸುತ್ತೀಯೋ? ‘ಈ ದೇಶಕ್ಕೆ ಬಂದು, ಇದನ್ನು ಹಾಳುಮಾಡಿಬಿಡು ಎಂದು ಯೆಹೋವನೇ ನನಗೆ ಆಜ್ಞಾಪಿಸಿದ್ದಾನೆ’” ಎಂದನು.
10120  2KI 20:18  ಬಾಬೆಲಿನ ಅರಸನು ಬಂದು ನಿನ್ನಿಂದ ಹುಟ್ಟುವಂಥ ಮಕ್ಕಳನ್ನು ತೆಗೆದುಕೊಂಡು ಹೋಗಿ, ಅವರನ್ನು ತಮ್ಮ ಅರಮನೆಯಲ್ಲಿ ಕಂಚುಕಿಗಳನ್ನಾಗಿ ನೇಮಿಸಿಕೊಳ್ಳುವರು ಎಂದು ಯೆಹೋವನು ಅನ್ನುತ್ತಾನೆ’” ಎಂದು ಹೇಳಿದನು.
10874  1CH 17:6  ನಾನು ಇಸ್ರಾಯೇಲರ ಮಧ್ಯದಲ್ಲಿ ಸಂಚರಿಸುತ್ತಿದ್ದಾಗೆಲ್ಲಾ ನನ್ನ ಜನರಾದ ಇಸ್ರಾಯೇಲರನ್ನು ಪಾಲಿಸುವುದಕ್ಕೋಸ್ಕರ ನನ್ನಿಂದ ನೇಮಿಸಲ್ಪಟ್ಟ ಯಾವ ನ್ಯಾಯಸ್ಥಾಪಕನ್ನಾದರೂ ನೀವು ನನಗೋಸ್ಕರ ದೇವದಾರುಮರದ ಮನೆಯನ್ನು ಏಕೆ ಕಟ್ಟಲಿಲ್ಲ ಎಂದು ಕೇಳಿದೆನೋ ಎಂಬುದಾಗಿ ಯೆಹೋವನು ಅನ್ನುತ್ತಾನೆ’” ಎಂದು ಹೇಳು ಎಂದನು.
11307  2CH 6:20  ಈ ಸ್ಥಳವನ್ನು ಕುರಿತು, ‘ನನ್ನ ನಾಮಪ್ರಭಾವವು ಇಲ್ಲಿ ವಾಸಿಸುವುದು’” ಎಂದು ಹೇಳಿದವನೇ, ನಿನ್ನ ಕೃಪಾ ಕಟಾಕ್ಷವು ಹಗಲಿರುಳು ಈ ಮಂದಿರದ ಮೇಲಿರಲಿ; ಇಲ್ಲಿ ನಿನ್ನ ಸೇವಕನು ಪ್ರಾರ್ಥಿಸುವಾಗಲೆಲ್ಲಾ ಸದುತ್ತರವನ್ನು ದಯಪಾಲಿಸು.
11423  2CH 11:4  ಯೆಹೋವನು ಇಂತೆನ್ನುತ್ತಾನೆ, ‘ನೀವು ನಿಮ್ಮ ಸಹೋದರರೊಡನೆ ಯುದ್ಧಮಾಡುವುದಕ್ಕೆ ಹೋಗಬಾರದು. ಎಲ್ಲರೂ ಹಿಂತಿರುಗಿ ಹೋಗಿರಿ; ಈ ಕಾರ್ಯವು ಯೆಹೋವನಿಂದಾಗಿದೆ ಎಂದು ಹೇಳಬೇಕು’” ಎಂಬ ಯೆಹೋವನ ವಾಕ್ಯವುಂಟಾಗಲು ಅವರು ಯೆಹೋವನ ಮಾತನ್ನು ಕೇಳಿ ಯಾರೊಬ್ಬಾಮನಿಗೆ ವಿರುದ್ಧವಾಗಿ ಯುದ್ಧಕ್ಕೆ ಹೊರಡದೆ ಹಿಂತಿರುಗಿ ಹೋದರು.
11447  2CH 12:5  ಆಗ ಪ್ರವಾದಿಯಾದ‍ ಶೆಮಾಯನು ರೆಹಬ್ಬಾಮನ ಬಳಿಗೂ, ಶೀಶಕನಿಗೆ ಹೆದರಿ ಯೆರೂಸಲೇಮಿನಲ್ಲಿ ಸೇರಿಬಂದಿದ್ದ ಯೆಹೂದ್ಯ ನಾಯಕರ ಬಳಿಗೂ ಬಂದು ಅವರಿಗೆ, “ಯೆಹೋವನು ಹೀಗೆನ್ನುತ್ತಾನೆ, ‘ನೀವು ನನ್ನನ್ನು ಬಿಟ್ಟು ಹೋದುದರಿಂದ ನಾನು ನಿಮ್ಮನ್ನು ಶೀಶಕನ ಕೈಯಲ್ಲಿ ಒಪ್ಪಿಸಿದ್ದೇನೆ’” ಎಂದು ಹೇಳಿದನು.
11563  2CH 18:16  ಆಗ ಅವನು, “ಇಸ್ರಾಯೇಲರೆಲ್ಲರೂ ಕುರುಬನಿಲ್ಲದ ಕುರಿ ಹಿಂಡುಗಳಂತೆ ಬೆಟ್ಟಗಳಲ್ಲಿ ಚದರಿ ಹೋದದ್ದನ್ನು ಕಂಡೆನು; ಆಗ ಯೆಹೋವನು, ‘ಇವರು ಒಡೆಯನಿಲ್ಲದವರಾಗಿ ಇರುತ್ತಾರೆ; ಸಮಾಧಾನದಿಂದ ತಮ್ಮ ತಮ್ಮ ಮನೆಗಳಿಗೆ ಹೋಗಲಿ’” ಎಂಬುದಾಗಿ ಉತ್ತರಕೊಟ್ಟನು.
13536  JOB 28:28  ಆಮೇಲೆ ಮನುಷ್ಯರಿಗೆ, ‘ಇಗೋ, ಕರ್ತನ ಭಯವೇ ಜ್ಞಾನ; ದುಷ್ಟತನವನ್ನು ತ್ಯಜಿಸುವುದೇ ವಿವೇಕ’” ಎಂದು ಹೇಳಿದನು.
15395  PSA 89:5  ‘ಶಾಶ್ವತವಾಗಿ ನಿನ್ನ ಸಂತತಿಯನ್ನು ಸ್ಥಾಪಿಸುವೆನು, ತಲತಲಾಂತರಗಳಿಗೂ ನಿನ್ನ ಸಿಂಹಾಸನವನ್ನು ಸ್ಥಿರಪಡಿಸುವೆನು ಎಂದು ಹೇಳಿದ್ದೇನೆ’” ಎಂಬುವುದೇ. ಸೆಲಾ
17784  ISA 3:7  ಆ ದಿನದಲ್ಲಿ ಅವನು ಗಟ್ಟಿಯಾಗಿ ಕೂಗುತ್ತಾ, ‘ನಾನು ನಿಮ್ಮನ್ನು ಸ್ವಸ್ಥಪಡಿಸುವುದಿಲ್ಲ. ನನ್ನ ಮನೆಯಲ್ಲಿ ಅನ್ನವಾಗಲೀ, ವಸ್ತ್ರವಾಗಲೀ ಇಲ್ಲ: ಜನರನ್ನು ಆಳುವ ಒಡೆಯನನ್ನಾಗಿ ನನ್ನನ್ನು ಮಾಡಬೇಡಿರಿ’” ಎಂದು ಹೇಳುವನು.
18415  ISA 36:15  ಹಿಜ್ಕೀಯನು ನಿಮಗೆ, ‘ಯೆಹೋವನನ್ನು ನಂಬಿರಿ; ಆತನು ನಮ್ಮನ್ನು ಹೇಗೋ ರಕ್ಷಿಸುವನು; ಈ ಪಟ್ಟಣವು ಅಶ್ಶೂರದ ಅರಸನ ವಶವಾಗುವುದಿಲ್ಲ’” ಎಂಬುದಾಗಿ ಹೇಳಿದರೆ,
18426  ISA 37:4  ನಿನ್ನ ದೇವರಾದ ಯೆಹೋವನು ಅಶ್ಶೂರದ ಅರಸನಿಂದ ಕಳುಹಿಸಲ್ಪಟ್ಟ ರಬ್ಷಾಕೆಯ ನಿಂದಾವಾಕ್ಯಗಳನ್ನು ಕೇಳಿರುವನು, ಅವನು ತನ್ನ ಯಜಮಾನನ ಹೆಸರಿನಲ್ಲಿ ಜೀವಸ್ವರೂಪನಾದ ದೇವರನ್ನು ದೂಷಿಸಿದ್ದರಿಂದ ಆತನು ಅವನಿಗೆ ಮುಯ್ಯಿತೀರಿಸಾನು. ಆದುದರಿಂದ ಉಳಿದಿರುವ ಸ್ವಲ್ಪ ಜನರಿಗೋಸ್ಕರ ಯೆಹೋವನನ್ನು ಪ್ರಾರ್ಥಿಸು’” ಎಂದು ಹೇಳಿದರು.
18631  ISA 44:28  ಕೋರೆಷನ ವಿಷಯವಾಗಿ, ‘ಅವನು ನನ್ನ ಮಂದೆಯನ್ನು ಕಾಯುವವನು, ಯೆರೂಸಲೇಮು ಕಟ್ಟಲ್ಪಡಲಿ, ದೇವಸ್ಥಾನದ ಅಸ್ತಿವಾರವು ಹಾಕಲ್ಪಡಲಿ’ ಎಂದು ಹೇಳಿ, ‘ನನ್ನ ಇಷ್ಟಾರ್ಥವನ್ನೆಲ್ಲಾ ನೆರವೇರಿಸತಕ್ಕವನು’” ಎಂಬುದಾಗಿ ಮಾತನಾಡುವವನು ನಾನೇ.
18644  ISA 45:13  ನಾನು ಕೋರೆಷನನ್ನು ಧರ್ಮೋದ್ದೇಶದಿಂದ ಉನ್ನತಿಗೆ ತಂದು ನೇಮಿಸಿದ್ದೇನೆ. ಅವನ ಮಾರ್ಗಗಳನ್ನೆಲ್ಲಾ ಸರಾಗಮಾಡುವೆನು. ಅವನು ನನ್ನ ಪಟ್ಟಣವನ್ನು ತಿರುಗಿ ಕಟ್ಟಿ ಕ್ರಯವನ್ನಾಗಲೀ, ಬಹುಮಾನವನ್ನಾಗಲೀ ಕೇಳಿಕೊಳ್ಳದೆ ಸೆರೆಯಾದ ನನ್ನ ಜನರನ್ನು ಬಿಡುಗಡೆ ಮಾಡುವೆನು’” ಎಂದು ಸೇನಾಧೀಶ್ವರನಾದ ಯೆಹೋವನು ಹೇಳುತ್ತಾನೆ.
18704  ISA 48:20  ಬಾಬೆಲಿನಿಂದ ಹೊರಡಿರಿ! ಕಸ್ದೀಯರ ಕಡೆಯಿಂದ ಹಾರಿಹೋಗಿರಿ! ಹರ್ಷಧ್ವನಿಯಿಂದ ಇದನ್ನು ತಿಳಿಸಿರಿ, ಪ್ರಕಟಿಸಿರಿ. ಭೂಮಿಯ ಕಟ್ಟಕಡೆಯವರೆಗೂ ಪ್ರಚಾರಪಡಿಸಿರಿ. ‘ಯೆಹೋವನು ತನ್ನ ಸೇವಕನಾದ ಯಾಕೋಬನ್ನು ವಿಮೋಚಿಸಿದ್ದಾನೆ’” ಎಂದು ಹೇಳಿರಿ.
18826  ISA 56:3  ಯೆಹೋವನನ್ನು ಅವಲಂಬಿಸಿದ ವಿದೇಶೀಯನು, ‘ಯೆಹೋವನು ತನ್ನ ಜನರಿಂದ ನನ್ನನ್ನು ಖಂಡಿತವಾಗಿ ಅಗಲಿಸುವನು’ ಎಂದು ಮಾತನಾಡದಿರಲಿ; ಮತ್ತು ನಪುಂಸಕನು, ‘ಅಯ್ಯೋ, ನಾನು ಗೊಡ್ಡುಮರ’” ಎಂದು ಅಂದುಕೊಳ್ಳದಿರಲಿ.
18831  ISA 56:8  ಇಸ್ರಾಯೇಲಿನ ದೇಶಭ್ರಷ್ಟರನ್ನು ಕೂಡಿಸಿಕೊಳ್ಳುವ ಕರ್ತನಾದ ಯೆಹೋವನ ನುಡಿಯೇನೆಂದರೆ, ‘ನಾನು ಕೂಡಿಸಿದ ಇಸ್ರಾಯೇಲರೊಂದಿಗೆ ಇನ್ನೂ ಹಲವರನ್ನು ಕೂಡಿಸುವೆನು’” ಎಂಬುದೇ.
19065  JER 2:31  ನೀವು ಎಂತಹ ದುಷ್ಟ ವಂಶದವರು! ಯೆಹೋವನ ಮಾತನ್ನು ಕೇಳಿರಿ, “ನಾನು ಇಸ್ರಾಯೇಲಿಗೆ ಅರಣ್ಯವಾಗಿಯೂ, ಗಾಢಾಂಧಕಾರದ ಪ್ರದೇಶವಾಗಿಯೂ ಏಕೆ ಪರಿಣಮಿಸಿದವು? ‘ನಾವು ಮನಬಂದಂತೆ ತಿರುಗುತ್ತಿದ್ದೇವೆ, ನಿನ್ನ ಹತೋಟಿಗೆ ಇನ್ನು ಬಾರೆವು’” ಎಂದು ನನ್ನ ಜನರು ಹೇಳುವುದು ಏಕೆ?
19140  JER 5:13  ಪ್ರವಾದಿಗಳು ಬರೀ ಗಾಳಿಯೇ, ದೈವೋಕ್ತಿಯು ಅವರಲ್ಲಿಲ್ಲ; ಅವರಿಗೆ ಹೀಗೆಯೇ ಆಗಲಿ’” ಅಂದುಕೊಂಡಿದ್ದಾರೆ.
19263  JER 9:18  ‘ಅಯ್ಯೋ, ಹಾಳಾದೆವು, ಭಂಗಪಟ್ಟೆವು; ನಾವು ನಮ್ಮ ದೇಶವನ್ನು ಬಿಟ್ಟೆವಲ್ಲಾ, ಶತ್ರುಗಳು ನಮ್ಮ ಮನೆಗಳನ್ನು ಕೆಡವಿದ್ದಾರಲ್ಲಾ’” ಎಂಬ ಪ್ರಲಾಪಧ್ವನಿಯು ಚೀಯೋನಿನೊಳಗಿಂದ ಕೇಳಿಸುತ್ತದೆ.
19303  JER 11:8  ಅವರಾದರೋ ಕೇಳಲಿಲ್ಲ, ಕಿವಿಗೊಡಲಿಲ್ಲ, ಪ್ರತಿಯೊಬ್ಬನೂ ತನ್ನ ತನ್ನ ದುಷ್ಟಹೃದಯದ ಹಟಕ್ಕೆ ತಕ್ಕ ಹಾಗೆ ನಡೆದನು; ಆದಕಾರಣ ಕೈಕೊಳ್ಳಬೇಕೆಂದು ನಾನು ಆಜ್ಞಾಪಿಸಿದರೂ ಅವರು ಕೈಗೊಳ್ಳದ ಈ ನಿಬಂಧನೆಯ ಶಾಪಗಳನ್ನೆಲ್ಲಾ ಅವರ ಮೇಲೆ ಬರಮಾಡಿದೆನು’” ಎಂದು ಹೇಳಿದನು.
19375  JER 14:13  ಅದಕ್ಕೆ ನಾನು, “ಅಯ್ಯೋ, ಕರ್ತನಾದ ಯೆಹೋವನೇ, ಇಗೋ ಪ್ರವಾದಿಗಳು ಈ ಜನರಿಗೆ, ‘ಖಡ್ಗವು ನಿಮ್ಮ ಕಣ್ಣಿಗೆ ಕಾಣದು, ಕ್ಷಾಮವು ನಿಮಗೆ ಸಂಭವಿಸದು; ಯೆಹೋವನು ಈ ಸ್ಥಳದಲ್ಲಿ ತಾನು ಪ್ರಮಾಣ ಮಾಡಿದಂತೆ ಸಮಾಧಾನವನ್ನು ನಿಮಗೆ ಕೊಡುವನು ಎಂದು ನುಡಿಯುತ್ತಾರೆ’” ಎಂಬುದಾಗಿ ಹೇಳಿದೆನು.
19377  JER 14:15  ಆದಕಾರಣ ನನ್ನ ಅಪ್ಪಣೆಯಿಲ್ಲದೆ ನನ್ನ ಹೆಸರಿನಿಂದ ಪ್ರವಾದಿಸುತ್ತಾ ಖಡ್ಗವೂ, ಕ್ಷಾಮವೂ ಈ ದೇಶಕ್ಕೆ ಬಾರವು ಎಂದು ಬೋಧಿಸುವ ಪ್ರವಾದಿಗಳ ವಿಷಯದಲ್ಲಿ ಯೆಹೋವನಾದ ನಾನು, ‘ಖಡ್ಗದಿಂದಲೂ, ಕ್ಷಾಮದಿಂದಲೂ ಈ ಪ್ರವಾದಿಗಳು ನಿರ್ಮೂಲರಾಗುವರು’” ಎಂದು ಹೇಳುತ್ತೇನೆ.
19386  JER 15:2  ಅವರು, ‘ನಾವು ಎಲ್ಲಿಗೆ ಹೋಗೋಣ?’ ಎಂದು ನಿನ್ನನ್ನು ಕೇಳಲು ನೀನು ಅವರಿಗೆ, ‘ಮರಣ ವ್ಯಾಧಿಗೆ ನೇಮಿತರಾದವರು ಮರಣವ್ಯಾಧಿಗೆ, ಖಡ್ಗಕ್ಕೆ ನೇಮಿತರಾದವರು ಖಡ್ಗಕ್ಕೆ ಬಲಿಯಾಗಲಿ. ಕ್ಷಾಮಕ್ಕೆ ನೇಮಿತರಾದವರು ಕ್ಷಾಮಕ್ಕೆ, ಸೆರೆಗೆ ನೇಮಿತರಾದವರು ಸೆರೆಗೆ ಗುರಿಯಾಗಿ ಹೋಗಲಿ; ಇದೇ ಯೆಹೋವನ ನುಡಿ’” ಎಂದು ಹೇಳು.
19393  JER 15:9  ಏಳು ಮಂದಿ ಮಕ್ಕಳನ್ನು ಹೆತ್ತ ಭಾಗ್ಯವಂತಳೂ ಬಳಲಿ ಪ್ರಾಣಬಿಟ್ಟಂತಿದ್ದಾಳೆ, ಹಗಲಿನಲ್ಲಿಯೇ ಆಕೆಯ ಪಾಲಿಗೆ ಸೂರ್ಯನು ಮುಳುಗಿದ್ದಾನೆ, ಆಶಾಭಂಗಪಟ್ಟು ಅವಮಾನಕ್ಕೆ ಈಡಾಗಿದ್ದಾಳೆ. ಆಕೆಯ ಉಳಿದ ಸಂತಾನವನ್ನು ಶತ್ರುಗಳ ಕಣ್ಣೆದುರಿನಲ್ಲಿ ನಾನು ಖಡ್ಗಕ್ಕೆ ಗುರಿಮಾಡುವೆನು’” ಇದು ಯೆಹೋವನ ನುಡಿ.