Wildebeest analysis examples for:   kan-kan2017   Word.’”    February 11, 2023 at 18:50    Script wb_pprint_html.py   by Ulf Hermjakob

1715  EXO 7:29  ನಿನ್ನ ಮೇಲೆಯೂ, ನಿನ್ನ ಪ್ರಜೆಗಳ ಮೇಲೆಯೂ ಮತ್ತು ಪರಿವಾರದವರ ಮೇಲೆಯೂ ಕಪ್ಪೆಗಳು ಹರಡಿಕೊಳ್ಳುವವು.’” ಎಂದನು.
2082  EXO 21:4  ಅವನ ಯಜಮಾನನು ಅವನಿಗೆ ಮದುವೆಮಾಡಿಸಿದ ಪಕ್ಷದಲ್ಲಿ ಆ ಹೆಂಡತಿಯಲ್ಲಿ ಗಂಡು ಇಲ್ಲವೆ ಹೆಣ್ಣುಮಕ್ಕಳು ಹುಟ್ಟಿದ್ದರೆ, ಆ ಹೆಂಡತಿಯೂ ಅವಳ ಮಕ್ಕಳೂ ಯಜಮಾನನ ಸೊತ್ತಾಗುವರು. ದಾಸನು ಒಂಟಿಗನಾಗಿಯೇ ಹೊರಟುಹೋಗಬೇಕು.’”
2844  LEV 5:13  ಮೇಲೆ ಕಂಡ ವಿಷಯಗಳಲ್ಲಿ ಯಾವ ವಿಧವಾಗಿ ಅವನು ದೋಷಿಯಾದರೂ, ಯಾಜಕನು ಅವನಿಗೋಸ್ಕರ ಹೀಗೆ ದೋಷಪರಿಹಾರವನ್ನು ಮಾಡಿದನಂತರ ಅವನಿಗೆ ಕ್ಷಮಾಪಣೆಯಾಗುವುದು. ಧಾನ್ಯನೈವೇದ್ಯ ದ್ರವ್ಯದಲ್ಲಿ ಉಳಿದದ್ದು ಹೇಗೆ ಯಾಜಕನಿಗೆ ಸಲ್ಲುತ್ತದೋ ಇದರಲ್ಲಿಯೂ ಉಳಿದದ್ದು ಯಾಜಕನಿಗೆ ಸಲ್ಲಬೇಕು.’”
3045  LEV 11:47  ಇದರಿಂದ ಶುದ್ಧ ಹಾಗು ಅಶುದ್ಧಗಳನ್ನು, ತಿನ್ನಬಹುದಾದ ಜೀವಿಗಳು ಮತ್ತು ತಿನ್ನಬಾರದಾದ ಜೀವಿಗಳ ಕುರಿತು ವಿವೇಚಿಸುವುದಕ್ಕೆ ನಿಮ್ಮಿಂದಾಗುವುದು.’”
3824  NUM 5:31  ಆಗ ಗಂಡನು ನಿರಪರಾಧಿಯಾಗುವನು. ಆ ಹೆಂಡತಿಯು ತನ್ನ ಅಕ್ರಮವನ್ನು ಹೊತ್ತುಕೊಳ್ಳುವಳು.’”
4170  NUM 15:16  ನಿಮಗೂ, ನಿಮ್ಮ ಬಳಿಯಲ್ಲಿ ಒಕ್ಕಲಿರುವ ಅನ್ಯದೇಶದವನಿಗೂ ಒಂದೇ ವಿಧವಾದ ನಿಯಮಗಳಿರಬೇಕು.’”
4185  NUM 15:31  ಆ ಮನುಷ್ಯನು ಯೆಹೋವನ ಮಾತನ್ನು ತಾತ್ಸಾರಮಾಡಿ ಆತನ ಆಜ್ಞೆಯನ್ನು ಮೀರಿದುದರಿಂದ ಕುಲದಿಂದ ಹೊರಗೆ ಹಾಕಬೇಕು. ಅವನು ತನ್ನ ಪಾಪದ ಫಲವನ್ನು ಅನುಭವಿಸಲಿ.’”
4567  NUM 27:11  ಇವರೂ ಇಲ್ಲದಿದ್ದರೆ ಕುಲದವರಲ್ಲಿ ಸಮೀಪಬಂಧುವಿಗೆ ಕೊಡಬೇಕು. ಇವನೇ ಆ ಸ್ವತ್ತನ್ನು ಅನುಭವಿಸಲಿ. ಯೆಹೋವನು ಮೋಶೆಗೆ ಅಪ್ಪಣೆಮಾಡಿದ ಈ ತೀರ್ಮಾನವು ಇಸ್ರಾಯೇಲರಿಗೆ ನ್ಯಾಯನಿಯಮಗಳಾಗಿರಬೇಕು.’”
4610  NUM 28:31  ಈ ಪಶುಗಳೆಲ್ಲಾ ಪೂರ್ಣಾಂಗವಾಗಿ ಕುಂದುಕೊರತೆ ಇಲ್ಲದೆ ಇರಬೇಕು. ನಿತ್ಯ ಸರ್ವಾಂಗಹೋಮ ಮತ್ತು ಅದಕ್ಕೆ ಸೇರಿದ ಧಾನ್ಯದ್ರವ್ಯ, ನೈವೇದ್ಯ ಇವುಗಳನ್ನಲ್ಲದೆ ಮೇಲೆ ಕಂಡ ಯಜ್ಞಗಳನ್ನೂ ಅವುಗಳೊಡನೆ ಕೊಡಬೇಕಾದ ಪಾನದ್ರವ್ಯ, ನೈವೇದ್ಯಗಳನ್ನೂ ಹೆಚ್ಚಾಗಿ ಸಮರ್ಪಿಸಬೇಕು.’”
4649  NUM 29:39  “‘ನೀವು ಯೆಹೋವನಿಗೆ ಕಾಣಿಕೆಯಾಗಿ ಹರಕೆಯನ್ನು ತೀರಿಸುವುದಕ್ಕಾಗಲಿ ಮಾಡುವ ಸರ್ವಾಂಗಹೋಮ, ಧಾನ್ಯದ್ರವ್ಯ ನೈವೇದ್ಯ, ಪಾನದ್ರವ್ಯ, ಸಮಾಧಾನಯಜ್ಞ ಇವುಗಳನ್ನಲ್ಲದೆ ಹಬ್ಬಗಳ ದಿನಗಳಲ್ಲಿ ಮೇಲೆ ಸೂಚಿಸಿರುವ ಯಜ್ಞಗಳನ್ನೂ ಹೆಚ್ಚಾಗಿ ಮಾಡಬೇಕು.’”
4818  NUM 33:56  ಅದಲ್ಲದೆ ನಾನು ಅವರಿಗೆ ಏನು ಮಾಡಬೇಕೆಂದು ಯೋಚಿಸಿದೇನೋ ಹಾಗೆ ನಿಮಗೂ ಮಾಡುವೆನು.’”
4881  NUM 35:34  ನೀವು ವಾಸಿಸುವ ದೇಶವನ್ನು ಅಪವಿತ್ರಮಾಡಬಾರದು. ಯೆಹೋವನೆಂಬ ನಾನೇ ಇಸ್ರಾಯೇಲರ ಮಧ್ಯದಲ್ಲಿ ವಾಸಿಸುತ್ತೇನೆ.’”
10078  2KI 19:13  ಹಮಾತ್, ಅರ್ಪಾದ್, ಸೆಫರ್ವಯಿಮ್, ಹೇನ, ಇವ್ವಾ ಎಂಬ ಪಟ್ಟಣಗಳ ಅರಸರು ಏನಾದರು? ಎಂದು ನಿನಗೆ ತಿಳಿಯದೋ ಎಂದು ಪತ್ರವನ್ನು ದೂತರ ಮೂಲಕ ಕಳುಹಿಸಿದ.’”
11351  2CH 7:22  ಆಗ ಅವರಿಗೆ, ‘ಈ ದೇಶದವರು ತಮ್ಮನ್ನು ಐಗುಪ್ತ ದೇಶದಿಂದ ಬರಮಾಡಿದ ತಮ್ಮ ಪೂರ್ವಿಕರ ದೇವರಾದ ಯೆಹೋವನನ್ನು ಕಡೆಗಣಿಸಿ, ಅನ್ಯ ದೇವತೆಗಳನ್ನು ಅವಲಂಬಿಸಿ ಅವುಗಳಿಗೆ ಅಡ್ಡಬಿದ್ದು ಆರಾಧಿಸಿದ್ದರಿಂದಲೇ ಆತನು ಈ ಎಲ್ಲಾ ಆಪತ್ತನ್ನು ಅವರಿಗೆ ಬರಮಾಡಿದ್ದಾನೆ.’” ಎಂದು ಉತ್ತರ ಕೊಡುವರು ಎಂದನು.
17856  ISA 7:4  ‘ಜಾಗರೂಕನಾಗಿ ಸುಮ್ಮನಿರು, ಭಯಪಡಬೇಡ. ರೆಚೀನ, ಅರಾಮ್ಯರ, ಪೆಕಹ ರೆಮಲ್ಯನ ಮಗನಾದ ಪೆಕಹನ ಕೋಪವು ಎಷ್ಟು ಹೆಚ್ಚಿದರೂ ಹೊಗೆಯಾಡುವ ಈ ಎರಡು ಮೋಟುಕೊಳ್ಳಿಗಳಿಗೆ ನಿನ್ನ ಹೃದಯವು ಕುಂದದಿರಲಿ.’”
18645  ISA 45:14  ಯೆಹೋವನ ಈ ಮಾತನ್ನು ಕೇಳಿರಿ, “ಐಗುಪ್ತದ ಆದಾಯವೂ, ಕೂಷಿನ ವ್ಯಾಪಾರವೂ, ಎತ್ತರದ ಮನುಷ್ಯರಾದ ಸೆಬಾಯರೂ ನಿಮ್ಮಲ್ಲಿಗೆ ಸೇರಿ ನಿಮ್ಮವರಾಗಿ ನಿಮ್ಮನ್ನು ಅನುಸರಿಸುವರು. ಸಂಕೋಲೆಗಳನ್ನು ಕಟ್ಟಿಕೊಂಡು ಬಂದು ನಿಮ್ಮ ಮುಂದೆ ಅಡ್ಡಬಿದ್ದು ಹೀಗೆ ಅರಿಕೆಮಾಡುವರು, ‘ದೇವರು ನಿಜವಾಗಿ ನಿಮ್ಮಲ್ಲಿದ್ದಾನೆ. ಇನ್ನು ಯಾವ ದೇವರೂ ಇಲ್ಲವೇ ಇಲ್ಲ.’”
19037  JER 2:3  ಇಸ್ರಾಯೇಲ್ ಯೆಹೋವನ ಬೆಳೆಯ ಪ್ರಥಮಫಲವಾಗಿ ಆತನಿಗೆ ಮೀಸಲಾಗಿತ್ತು; ಅದನ್ನು ತಿಂದವರೆಲ್ಲರೂ ದೋಷಿಗಳಾಗಿ ಕೇಡಿಗೆ ಗುರಿಯಾಗುವ. ಇದು ಯೆಹೋವನು ನುಡಿ.’”
19485  JER 19:9  ಅವರು ತಮ್ಮ ಗಂಡು ಹೆಣ್ಣು ಮಕ್ಕಳ ಮಾಂಸವನ್ನೂ ತಿನ್ನುವಂತೆ ಮಾಡುವೆನು. ಅವರ ಪ್ರಾಣವನ್ನು ಹುಡುಕುವ ಶತ್ರುಗಳು ಅವರನ್ನು ಮುತ್ತಿ, ಸಂಕಟಕ್ಕೆ ಗುರಿಮಾಡುವಾಗ, ಅವರು ತಮ್ಮ ಇಷ್ಟ ಮಿತ್ರರ ಮಾಂಸವನ್ನೂ ತಿನ್ನುವಂತೆ ಮಾಡುವೆನು. ಇದು ಯೆಹೋವನಾದ ನನ್ನ ನುಡಿ.’”
19489  JER 19:13  ಯೆರೂಸಲೇಮಿನ ಮನೆಗಳೂ, ಯೆಹೂದದ ಅರಸರ ಮನೆಗಳೂ ಅಂದರೆ ಯಾವ ಯಾವ ಮನೆಗಳ ಮಾಳಿಗೆಗಳ ಮೇಲೆ ಆಕಾಶದ ನಕ್ಷತ್ರಗಣಕ್ಕೆಲ್ಲ ಧೂಪಹಾಕಿ, ಅನ್ಯದೇವತೆಗಳಿಗೆ ಪಾನನೈವೇದ್ಯಗಳನ್ನು ಸುರಿದಿದ್ದಾರೋ, ಆ ಮನೆಗಳೆಲ್ಲಾ ಹೊಲಸಾಗಿ ತೋಫೆತ್ ಎಂಬ ಸ್ಥಳಕ್ಕೆ ಸಮಾನವಾಗುವವು.’”
19593  JER 23:40  ಮತ್ತು ನಾನು ನಿತ್ಯನಿಂದೆಯನ್ನೂ ಎಂದಿಗೂ ಮರೆಯದ ಶಾಶ್ವತ ಅವಮಾನವನ್ನು ನಿಮಗೆ ಬರಮಾಡುವೆನು.’”
19680  JER 27:15  ಯೆಹೋವನು ಇಂತೆನ್ನುತ್ತಾನೆ, ‘ನಾನು ಅವರನ್ನು ಕಳುಹಿಸಲಿಲ್ಲ; ನನ್ನ ಹೆಸರೆತ್ತಿ ಸುಳ್ಳನ್ನು ಸಾರುತ್ತಾರೆ. ನೀವೂ, ನಿಮಗೆ ಪ್ರವಾದಿಸುವ ಪ್ರವಾದಿಗಳೂ ನನ್ನಿಂದ ಅಟ್ಟಲ್ಪಟ್ಟು ಅಳಿದುಹೋಗುವುದಕ್ಕೆ ಅವರ ದುರ್ಬೋಧನೆಯು ಆಸ್ಪದವಾಗುವುದು.’”
19687  JER 27:22  ‘ಅವು ಬಾಬಿಲೋನಿಗೆ ಒಯ್ಯಲ್ಪಟ್ಟು ನಾನು ಅವುಗಳನ್ನು ಉದ್ಧರಿಸುವ ದಿನದ ತನಕ ಅಲ್ಲೇ ಇರುವವು; ಆಗ ನಾನು ಅವುಗಳನ್ನು ಪುನಃ ತಂದು ಈ ಸ್ಥಳಕ್ಕೆ ಸೇರಿಸುವೆನು. ಇದು ಯೆಹೋವನ ನುಡಿ.’”
19691  JER 28:4  “‘ಮತ್ತು ಯೆಹೋಯಾಕೀಮನ ಮಗನೂ ಯೆಹೂದದ ಅರಸನೂ ಆದ ಯೆಕೊನ್ಯನನ್ನೂ ಬಾಬಿಲೋನಿಗೆ ಸೆರೆಹೋದ ಎಲ್ಲಾ ಯೆಹೂದ್ಯರನ್ನೂ ಈ ಸ್ಥಳಕ್ಕೆ ತಿರುಗಿ ಬರಮಾಡುವೆನು. ಬಾಬೆಲಿನ ಅರಸನು ನಿಮಗೆ ಹೇರಿರುವ ನೊಗವನ್ನು ನಾನು ಮುರಿದುಬಿಡುವೆನು. ಇದು ಯೆಹೋವನ ನುಡಿ.’”
19779  JER 31:19  ತಿರುಗಿಸಲ್ಪಟ್ಟ ಮೇಲೆಯೇ ಪಶ್ಚಾತ್ತಾಪ ಪಟ್ಟೆನು; ತಿಳಿವಳಿಕೆಯನ್ನು ಹೊಂದಿದ ಮೇಲೆಯೇ ತೊಡೆಯನ್ನು ಬಡಿದುಕೊಂಡೆನು. ನನ್ನ ಯೌವನದ ಅವಮಾನವನ್ನು ನನ್ನ ಮೇಲೆ ಹೊತ್ತುಕೊಂಡ ಕಾರಣ ಲಜ್ಜೆಗೊಂಡೆನು, ಹೌದು, ತುಂಬಾ ನಾಚಿಕೆಪಟ್ಟೆನು.’”
19853  JER 33:9  ನಾನು ಈ ಜನರಿಗೆ ಅನುಗ್ರಹಿಸುವ ಎಲ್ಲಾ ಮೇಲುಗಳ ಸುದ್ದಿಯನ್ನು ಕೇಳಿ ನಾನು ಈ ಪಟ್ಟಣಕ್ಕೆ ಉಂಟುಮಾಡುವ ಸುಖ ಸಮಾಧಾನಗಳನ್ನು ನೋಡಿ ಹೆದರಿ ನಡುಗುವ ಸಕಲ ಭೂರಾಜ್ಯಗಳ ಮುಂದೆ ಈ ಪಟ್ಟಣವು ನನ್ನ ಕೀರ್ತಿಯೂ, ಮಹಿಮೆಯೂ ಮತ್ತು ಆನಂದದ ಬಿರುದು ಆಗುವುದು.’”
20062  JER 42:18  ಇಸ್ರಾಯೇಲಿನ ದೇವರೂ ಸೇನಾಧೀಶ್ವರನೂ ಆದ ಯೆಹೋವನು ಇಂತೆನ್ನುತ್ತಾನೆ, ನನ್ನ ಉಗ್ರರೋಷಾಗ್ನಿಯು ಯೆರೂಸಲೇಮಿನವರ ಮೇಲೆ ಹೇಗೆ ಸುರಿಯಿತೋ ಹಾಗೆಯೇ ನೀವು ಐಗುಪ್ತದಲ್ಲಿ ಕಾಲಿಟ್ಟ ಕೂಡಲೆ ನನ್ನ ರೋಷಾಗ್ನಿಯು ನಿಮ್ಮ ಮೇಲೆಯೂ ಸುರಿಯುವುದು; ನೀವು ಅಪವಾದ, ವಿಸ್ಮಯ, ಶಾಪ ಮತ್ತು ದೂಷಣೆಗಳಿಗೆ ಗುರಿಯಾಗುವಿರಿ; ಈ ಸ್ಥಳವು ಮತ್ತೆ ನಿಮ್ಮ ಕಣ್ಣಿಗೆ ಬೀಳದು.’”
20079  JER 43:13  ಐಗುಪ್ತ ದೇಶದಲ್ಲಿರುವ ಸೂರ್ಯಪುರಿಯ ಸ್ತಂಭಗಳನ್ನು ಒಡೆದುಹಾಕಿ, ಐಗುಪ್ತದ ದೇವಾಲಯಗಳನ್ನು ಬೆಂಕಿಯಿಂದ ಸುಟ್ಟುಬಿಡುವನು.’”
20642  EZK 6:10  ನಾನೇ ಯೆಹೋವನು ಎಂದು ಅವರಿಗೆ ಗೊತ್ತಾಗುವುದು; ಈ ಕೇಡನ್ನು ಅವರಿಗೆ ಮಾಡುವೆನು ಎಂದು ನಾನು ಹೇಳಿದ್ದು ಬರೀ ಮಾತಲ್ಲ.’”
20646  EZK 6:14  ನಾನು ಅವರ ಮೇಲೆ ಕೈಯೆತ್ತಿ ಅವರು ವಾಸವಾಗಿರುವ ದೇಶವನ್ನೆಲ್ಲಾ ಅರಣ್ಯದಿಂದ ದಿಬ್ಲದವರೆಗೂ ಹಾಳುಪಾಳುಮಾಡುವೆನು; ನಾನೇ ಯೆಹೋವನು ಎಂದು ಅವರಿಗೆ ಗೊತ್ತಾಗುವುದು.’”
20769  EZK 12:20  ಆಗ ಜನ ತುಂಬಿದ ಊರುಗಳು ಹಾಳಾಗಿ ದೇಶವು ಬೀಡುಬೀಳುವುದು; ನಾನೇ ಯೆಹೋವನು ಎಂದು ನಿಮಗೆ ಗೊತ್ತಾಗುವುದು.’”
20902  EZK 17:8  ಅದು ಸೊಂಪಾದ ದ್ರಾಕ್ಷಾಲತೆಯಾಗಿ ರೆಂಬೆಗಳನ್ನು ಹರಡಿ ಫಲಕೊಡುವುದಕ್ಕೆ ಅನುಕೂಲವಾದ ಒಳ್ಳೆಯ ನೀರಾವರಿಯ ನೆಲದಲ್ಲಿ ನಾಟಿಕೊಂಡಿತ್ತು.’”
20981  EZK 20:17  ಆದರೂ ನಾನು ಅವರನ್ನು ನಾಶ ಮಾಡಲಿಲ್ಲ; ನನ್ನ ಕಟಾಕ್ಷವು ಅವರನ್ನು ಉಳಿಸಿತು; ನಾನು ಅವರನ್ನು ಅರಣ್ಯದಲ್ಲಿ ನಿರ್ಮೂಲಮಾಡಲಿಲ್ಲ.’”
21025  EZK 21:17  ನರಪುತ್ರನೇ, ಕೂಗಿಕೋ, ಗೋಳಾಡು! ಖಡ್ಗವು ನನ್ನ ಜನರ ಮೇಲೆಯೂ ಇಸ್ರಾಯೇಲಿನ ಪ್ರಭುಗಳೆಲ್ಲರ ಮೇಲೆಯೂ ಬಿದ್ದಿದೆ; ಆ ಪ್ರಭುಗಳು ನನ್ನ ಜನರೊಂದಿಗೆ ಖಡ್ಗಕ್ಕೆ ತುತ್ತಾಗಿದ್ದಾರೆ; ತೊಡೆಯನ್ನು ಬಡಿದುಕೋ.’”
21061  EZK 22:16  ಜನಾಂಗಗಳ ಕಣ್ಣೆದುರಿಗೆ ನಿನ್ನಷ್ಟಕ್ಕೆ ನೀನೇ ಅಪಕೀರ್ತಿಗೆ ಗುರಿಯಾಗುವಿ; ನಾನೇ ಯೆಹೋವನು ಎಂದು ನಿನಗೆ ಗೊತ್ತಾಗುವುದು.’”
21067  EZK 22:22  ಬೆಳ್ಳಿಯು ಕುಲುಮೆಯೊಳಗೆ ಕರಗುವಂತೆ ನೀವು ನನ್ನ ರೋಷಾಗ್ನಿಯಲ್ಲಿ ಕರಗುವಿರಿ; ನಿಮ್ಮ ಮೇಲೆ ರೋಷಾಗ್ನಿಯನ್ನು ಸುರಿಸಿದಾತನು ಯೆಹೋವನಾದ ನಾನೇ ಎಂದು ನಿಮಗೆ ಗೊತ್ತಾಗುವುದು.’”
21130  EZK 24:5  ಹಿಂಡಿನಲ್ಲಿ ಶ್ರೇಷ್ಠವಾದದನ್ನು ತೆಗೆದುಕೋ; ಹಂಡೆಯ ತಳದಲ್ಲಿ ಎಲುಬುಗಳನ್ನು ರಾಶಿಯಾಗಿ ಒಟ್ಟು; ಚೆನ್ನಾಗಿ ಕುದಿಸು; ಹೌದು, ಎಲುಬುಗಳು ಅದರಲ್ಲಿ ಬೇಯಲಿ.’”
21149  EZK 24:24  ಹೀಗೆ ಯೆಹೆಜ್ಕೇಲನು ನಿಮಗೆ ಮುಂಗುರುತಾಗಿರುವನು; ಅವನು ಮಾಡಿದಂತೆಯೇ ಎಲ್ಲವನ್ನು ನೀವು ಮಾಡುವಿರಿ; ಇದು ಸಂಭವಿಸುವಾಗ ನಾನೇ ಕರ್ತನಾದ ಯೆಹೋವನು ಎಂದು ನಿಮಗೆ ಗೊತ್ತಾಗುವುದು.’”
21157  EZK 25:5  ನಾನು ರಬ್ಬಾ ಪಟ್ಟಣವನ್ನು ಒಂಟೆಗಳಿಗೆ ಲಾಯವನ್ನಾಗಿಯೂ, ಅಮ್ಮೋನ್ ಸೀಮೆಯನ್ನು ಹಿಂಡುಗಳಿಗೆ ತಂಗುವ ಸ್ಥಳವನ್ನಾಗಿಯೂ ಮಾಡುವೆನು. ನಾನೇ ಯೆಹೋವನು ಎಂದು ನಿಮಗೆ ಗೊತ್ತಾಗುವುದು.’”
21245  EZK 28:19  ಜನಾಂಗಗಳಲ್ಲಿ ನಿನ್ನನ್ನು ಬಲ್ಲವರೆಲ್ಲರೂ ನಿನ್ನ ಗತಿಗೆ ಬೆಚ್ಚಿ ಬೆರಗಾಗುವರು; ನೀನು ಸಂಪೂರ್ಣ ನಾಶವಾಗಿ ಇನ್ನೆಂದಿಗೂ ಇಲ್ಲದಂತಾಗುವೆ.’”
21252  EZK 28:26  ಅಲ್ಲಿ ನಿರ್ಭಯವಾಗಿ ವಾಸಿಸುವರು, ಮನೆಗಳನ್ನು ಕಟ್ಟಿಕೊಂಡು, ದ್ರಾಕ್ಷಿಯ ತೋಟಗಳನ್ನು ಮಾಡಿಕೊಂಡು, ಸುಖವಾಗಿ ವಾಸಿಸುವರು; ಅವರನ್ನು ಆಸಡ್ಡೆ ಮಾಡಿದವರೆಲ್ಲರ ಮೇಲೆ ನಾನು ನ್ಯಾಯ ತೀರಿಸಿದ ಮೇಲೆ ನಿರ್ಭಯವಾಗಿ ವಾಸಿಸುವರು. ಆಗ ಯೆಹೋವನಾದ ನಾನೇ ಅವರ ದೇವರು ಎಂದು ಅವರಿಗೆ ನಿಶ್ಚಯವಾಗುವುದು.’”
21264  EZK 29:12  ಹಾಳು ಬಿದ್ದಿರುವ ದೇಶಗಳ ಮಧ್ಯದಲ್ಲಿ ಐಗುಪ್ತ ದೇಶವನ್ನೂ ಹಾಳುಮಾಡುವೆನು; ಪಾಳುಬಿದ್ದಿರುವ ಪಟ್ಟಣಗಳೊಳಗೆ ಅದರ ಪಟ್ಟಣಗಳನ್ನೂ ಪಾಳುಬೀಳಿಸುವೆನು; ನಲ್ವತ್ತು ವರ್ಷ ಹಾಗೆಯೇ ಇರುವುದು; ನಾನು ಐಗುಪ್ತ್ಯರನ್ನು ಜನಾಂಗಗಳಲ್ಲಿ ಚದುರಿಸಿ, ದೇಶದೇಶಗಳಲ್ಲಿ ಚದುರಿಸುವೆನು.’”
21278  EZK 30:5  “‘ಕೂಷ್ಯರು, ಪೂಟ್ಯರು, ಲೂದ್ಯರು, ಬಗೆಬಗೆಯ ಸಕಲ ವಿದೇಶೀಯರು, ಕೂಬ್ಯರು, ಒಡಂಬಡಿಕೆ ಮಾಡಿಕೊಂಡ ಮಿತ್ರ ರಾಜ್ಯದವರೂ ಐಗುಪ್ತ್ಯರೊಂದಿಗೆ ಖಡ್ಗದಿಂದ ಹತರಾಗುವರು.’”
21319  EZK 32:2  ಅರಸನಾದ ಫರೋಹನ ವಿಷಯವಾಗಿ ಶೋಕ ಗೀತೆಯನ್ನು ಹಾಡಿ ಅವನಿಗೆ ಹೀಗೆ ನುಡಿ, ‘ನೀನು ಜನಾಂಗಗಳಲ್ಲಿ ಸಿಂಹದ ಮರಿಗೆ ಸಮನಾಗಿರುವೆ ಮತ್ತು ಸಮುದ್ರಗಳಲ್ಲಿರುವ ತಿಮಿಂಗಿಲದ ಹಾಗಿರುವೆ. ನೀನಿದ್ದ ನದಿಗಳನ್ನು ಭೇದಿಸಿಕೊಂಡು ಬಂದು, ನೀರನ್ನು ನಿನ್ನ ಕಾಲುಗಳಿಂದ ಕಲಕಿ, ಜನಾಂಗಗಳ ಹೊಳೆಗಳನ್ನೂ ತುಳಿದು ಬದಿಮಾಡಿದೆ.’”
21440  EZK 36:12  ಬೆಟ್ಟದ ಸೀಮೆಯೇ, ನಾನು ನಿನ್ನಲ್ಲಿ ಜನ ಸಂಚಾರವನ್ನು ಉಂಟುಮಾಡುವೆನು; ನನ್ನ ಜನರಾದ ಇಸ್ರಾಯೇಲರೇ, ನಿನ್ನಲ್ಲಿ ಸಂಚರಿಸುತ್ತಾ ನಿನ್ನನ್ನು ಸ್ವತ್ತಾಗಿ ಅನುಭವಿಸುವರು; ನೀನು ಇನ್ನು ಅವರಿಗೆ ಪುತ್ರ ಶೋಕವನ್ನು ಕೊಡುವುದಿಲ್ಲ.’”
21472  EZK 37:6  ನಾನು ನಿಮ್ಮ ಮೇಲೆ ನರಗಳನ್ನು ಹಬ್ಬಿಸಿ, ಮಾಂಸವನ್ನು ತಂದು, ಚರ್ಮವನ್ನು ಹೊದಿಸಿ, ನಿಮ್ಮಲ್ಲಿ ಶ್ವಾಸವನ್ನು ತುಂಬುವೆನು; ಆಗ ನೀವು ಬದುಕಿ ನಾನೇ ಯೆಹೋವನು ಎಂದು ತಿಳಿದುಕೊಳ್ಳುವಿರಿ.’”
21475  EZK 37:9  ಆಗ ಆತನು ನನಗೆ, “ನರಪುತ್ರನೇ, ನೀನು ಶ್ವಾಸಕ್ಕೆ ನುಡಿ, ‘ಓ ಶ್ವಾಸವೇ,’ ಕರ್ತನಾದ ಯೆಹೋವನು ಇಂತೆನ್ನುತ್ತಾನೆ, ‘ನೀನು ಚತುರ್ದಿಕ್ಕುಗಳಿಂದ ಬೀಸಿ, ಈ ಹತಶರೀರಗಳು ಬದುಕುವಂತೆ ಅವುಗಳ ಮೇಲೆ ಊದು.’”
21486  EZK 37:20  ಹೇಳುವಾಗ ನೀನು ಹೆಸರು ಬರೆದಿರುವ ಕೋಲುಗಳು ಅವರ ಕಣ್ಣೆದುರಿಗೆ ನಿನ್ನ ಕೈಯಲ್ಲಿರಲಿ.’”
21503  EZK 38:9  ನೀನು ಮೇಲೇರಿ ಬಿರುಗಾಳಿಯಂತೆ ಹೊರಟು ಬರುವೆ. ನಿನ್ನ ಎಲ್ಲಾ ದಂಡುಗಳೂ ಅನೇಕ ಜನರ ಸಹಿತವಾಗಿ ಕಾರ್ಮುಗಿಲಿನಂತೆ ದೇಶವನ್ನು ಮುಚ್ಚಿಬಿಡುವುದು.’”
21510  EZK 38:16  ನನ್ನ ಜನರಾದ ಇಸ್ರಾಯೇಲರ ಮೇಲೆ ಬಿದ್ದು, ಕಾರ್ಮುಗಿಲಿನಂತೆ ದೇಶವನ್ನು ಮುಚ್ಚಿಬಿಡುವಿ; ಗೋಗನೇ, ಜನಾಂಗಗಳ ಕಣ್ಣೆದುರಿಗೆ ನಿನ್ನ ನಾಶದಿಂದ ನನ್ನ ಗೌರವವನ್ನು ಕಾಪಾಡಿಕೊಂಡು ನಾನೇ ಯೆಹೋವನೆಂದು ಜನಾಂಗಗಳಿಗೆ ಗೋಚರವಾಗುವಂತೆ ನಾನು ನಿನ್ನನ್ನು ಕಾಲಾನುಕಾಲಕ್ಕೆ ನನ್ನ ದೇಶದ ಮೇಲೆ ಬೀಳಮಾಡುವೆನು.’”
21514  EZK 38:20  ಆಗ ಸಮುದ್ರದ ಮೀನುಗಳು, ಆಕಾಶದ ಪಕ್ಷಿಗಳು, ಕಾಡುಮೃಗಳು ನೆಲದಲ್ಲಿ ಹರಿದಾಡುವ ಕ್ರಿಮಿಕೀಟಗಳು, ಭೂಮಂಡಲದ ಸಕಲ ಮನುಷ್ಯರೂ ನನ್ನೆದುರಿಗೆ ನಡುಗುವವು; ಪರ್ವತಗಳು ಉರುಳಿಹೋಗುವವು, ಝರಿಗಳು ಕವಚಿಗೊಳ್ಳುವವು, ಎಲ್ಲಾ ಗೋಡೆಗಳು ನೆಲಸಮವಾಗುವವು.’”
22179  HOS 2:7  ಅವರ ತಾಯಿ ವ್ಯಭಿಚಾರ ಮಾಡಿದ್ದಾಳೆ, ಹೆತ್ತವಳು ನಾಚಿಕೆಗೇಡಿಯಾಗಿ ನಡೆದಿದ್ದಾಳೆ. ‘ತನಗೆ ಬೇಕಾದ ಅನ್ನ ಪಾನಗಳನ್ನೂ, ಉಣ್ಣೆ ನಾರುಗಳನ್ನೂ, ತೈಲವನ್ನೂ ಪಾನಕಗಳನ್ನೂ ತನಗೆ ಕೊಡುವ ಹಾಗೂ ತನ್ನೊಂದಿಗೆ ವ್ಯಭಿಚಾರದಲ್ಲಿ ತೊಡಗಿಸಿಕೊಂಡವರ ಹಿಂದೆ ಹೋಗುವೆನು ಅಂದುಕೊಂಡಿದ್ದಾಳೆ.’”
22991  ZEC 3:10  “ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, ‘ಆ ದಿನದಲ್ಲಿ ನೀವೆಲ್ಲರೂ ನಿಮ್ಮ ನಿಮ್ಮ ನೆರೆಹೊರೆಯವರನ್ನು ದ್ರಾಕ್ಷಾಲತೆ, ಅಂಜೂರಗಿಡ ಇವುಗಳ ನೆರಳಿನಲ್ಲಿ ನೆಮ್ಮದಿಯಿಂದ ವಿಶ್ರಮಿಸಲು ಕರೆಯುವಿರಿ.’”
23031  ZEC 6:15  ದೂರದಲ್ಲಿರುವವರು ಬಂದು ಯೆಹೋವನ ಆಲಯವನ್ನು ಕಟ್ಟುವುದಕ್ಕೆ ಕೈಹಾಕುವರು; ಆಗ ನನ್ನನ್ನು ನಿಮ್ಮ ಬಳಿಗೆ ಕಳುಹಿಸಿದಾತನು ಸೇನಾಧೀಶ್ವರನಾದ ಯೆಹೋವನೇ ಎಂದು ನಿಮಗೆ ದೃಢವಾಗುವುದು. ನೀವು ನಿಮ್ಮ ದೇವರಾದ ಯೆಹೋವನ ಮಾತನ್ನು ಮನಃಪೂರ್ವಕವಾಗಿ ಕೇಳಿದರೆ ಇದೆಲ್ಲಾ ನೆರವೇರುವುದು.’”
23045  ZEC 7:14  ಅವರು ನೋಡದ ಎಲ್ಲಾ ಜನಾಂಗಗಳ ಮಧ್ಯಕ್ಕೆ ಅವರನ್ನು ತೂರಿಬಿಡುವೆನು. ಯೆಹೋವನ ಈ ಮಾತಿನಂತೆ ಅವರು ಚದರಿದ ಮೇಲೆ ದೇಶವು ಹಾಳಾಯಿತು. ಅದರಲ್ಲಿ ಯಾರೂ ಹೋಗುತ್ತಿರಲಿಲ್ಲ, ಬರುತ್ತಿರಲಿಲ್ಲ; ಆ ರಮ್ಯ ದೇಶವನ್ನು ಹಾಳುಮಾಡಿದರು.’”
23064  ZEC 8:19  ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, ‘ನಾಲ್ಕನೆಯ ತಿಂಗಳಿನ ಉಪವಾಸ, ಐದನೆಯ ತಿಂಗಳಿನ ಉಪವಾಸ, ಏಳನೆಯ ತಿಂಗಳಿನ ಉಪವಾಸ, ಹತ್ತನೆಯ ತಿಂಗಳಿನ ಉಪವಾಸ ಇವು ಯೆಹೂದ ವಂಶಕ್ಕೆ ವಿಶೇಷವಾದ ಹಬ್ಬಗಳಾಗಿ ಹರ್ಷೋಲ್ಲಾಸಗಳನ್ನು ಉಂಟುಮಾಡುವವು; ಹೀಗಿರಲು ಸತ್ಯವನ್ನೂ, ಸಮಾಧಾನವನ್ನೂ ಪ್ರೀತಿಸಿರಿ.’”
28263  ROM 10:7  ಎಂದಾಗಲಿ ‘ಕ್ರಿಸ್ತನನ್ನು ಸತ್ತವರೊಳಗಿಂದ ಎಬ್ಬಿಸಿಕೊಂಡು ಬರುವುದಕ್ಕಾಗಿ ಯಾರು ಪಾತಾಳಲೋಕಕ್ಕೆ ಇಳಿದುಹೋದರು? ಎಂದಾಗಲಿ ನಿನ್ನ ಮನಸ್ಸಿನಲ್ಲಿ ಅಂದುಕೊಳ್ಳಬಾರದು.’” ಆದರೆ ಅದು ಏನನ್ನು ಹೇಳುತ್ತದೆ.
30073  HEB 3:11  ಹೀಗಿರಲು ‘ಅವರು ನನ್ನ ವಿಶ್ರಾಂತಿಯಲ್ಲಿ ಸೇರುವುದೇ ಇಲ್ಲವೆಂದು ಕೋಪಗೊಂಡು ಪ್ರಮಾಣಮಾಡಿದೆನು.’”